ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020
ಪದವಿಯ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಕೂಡಲೇ ಲ್ಯಾಪ್’ಟಾಪ್ ವಿತರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಹಿಂದೆ ಸರ್ಕಾರ ಘೋಷಿಸಿದಂತೆ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಿಸಬೇಕಿತ್ತು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಲ್ಯಾಪ್’ಟಾಪ್ ವಿತರಣೆ ಮಾಡಿರಲಿಲ್ಲ. ಹಾಗಾಗಿ ವಿತರಣೆಗೆ ಬಂದಿದ್ದ ಲ್ಯಾಪ್’ಟಾಪ್’ಗಳು ಹಿಂತಿರುಗಿವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.
ಇನ್ನು, ಈ ಬಾರಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಮಾಡಲಾಗಿದೆ. ಅದರೆ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಈವರೆಗೂ ಲ್ಯಾಪ್’ಟಾಪ್ ಸಿಕ್ಕಿಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೂ ಲ್ಯಾಪ್’ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]