ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ, ಸರ್ಕಾರಕ್ಕೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 3 ಫೆಬ್ರವರಿ 2020

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯ ವಿವಿ ಮತ್ತು ಶಾಹಿನ್‌ ಬಾಗ್’ನಲ್ಲಿ ಎನ್.ಆರ್.ಸಿ, ಸಿ.ಎ.ಎ, ಎನ್.ಪಿ.ಆರ್, ವಿರುದ್ಧ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಗುಂಡುಹಾರಿಸಿದ ಆರೋಪಿಗಳ ವಿರುದ್ಧ  ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಇವತ್ತು ಪೀಸ್ ಆರ್ಗನೈಸೇಶನ್ ಮಹಿಳಾ ಘಟಕದ ವತಿಯಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

2019 readers copy new

ಶಾಂತಿಯುತ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ವಿರುದ್ಧ ಏಕಾಏಕಿಯಾಗಿ ರಾಮ್ ಭಕ್ತ ಗೋಪಾಲ್ ಎಂಬಾತ, ಪ್ರಚೋದನಕಾರಿ ಹೇಳಿಕೆ ಕೂಗುತ್ತ ಹೋರಾಟಗಾರರ ವಿರುದ್ಧ ಗುಂಡು ಹಾರಿಸಿದ್ದಾನೆ. ಪೊಲೀಸರ ಎದುರಲ್ಲೆ ಗುಂಡಿನ ದಾಳಿ ನಡೆಸಿದ್ದಾನೆ. ಘಟನಾ ಸ್ಥಳದಲ್ಲಿದ್ದ ದೆಹಲಿ ಪೊಲೀಸರು ಪ್ರತಿಭಟನಾಕಾರರಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಕೂಡ ಪ್ರತಿಭಟನಾಕಾರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ರೀತಿ ಶಾಹಿನ್ ಬಾಗ್’ನಲ್ಲೂ ಸಹ ಕಪಿಲ್ ಗುಜ್ಜರ್ ಎಂಬಾತ ಮಹಿಳೆಯರ, ಮಕ್ಕಳ ಮೇಲೆ ಗುಂಡನ್ನು ಹಾರಿಸಿದ್ದಾನೆ. ಹೋರಾಟಗಳನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರದ ಸಚಿವರು, ಬಿಜೆಪಿಯ ಕೆಲ ರಾಜಕಾರಣಿಗಳು ದೆಹಲಿಯ ಚುನಾವಣಾ ಪ್ರಚಾರದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡುವ ಮೂಲಕ ತಮ್ಮ ಸಹಚರರು, ಕಾರ್ಯಕರ್ತರಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಎಹ್ಸಾಸ್, ರೇಷ್ಮಾ, ಸಮೀನ ಮತ್ತಿತರರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment