ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020
ಅರಣ್ಯ ಪ್ರದೇಶದಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರಿಗೆ ಶಿವಮೊಗ್ಗದ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ಮಾಡಿ ಕೇಸ್ ದಾಖಲಿಸಿದ್ದಾರೆ.
ಶಿವಮೊಗ್ಗ ಅಬಕಾರಿ ರೇಂಜ್ ವ್ಯಾಪ್ತಿಯಲ್ಲಿ ಹಲವು ಕಡೆ ದಾಳಿ ನಡೆಸಲಾಗಿದೆ. ಸಾರ್ವಜನಿಕ ಪ್ರದೇಶ, ಅರಣ್ಯಗಳಲ್ಲಿ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಲಾಗಿದೆ.
ಎಷ್ಟು ಕಡೆ ದಾಳಿಯಾಗಿದೆ? ಎಷ್ಟು ಮದ್ಯ ವಶವಾಗಿದೆ?
ಶಿವಮೊಗ್ಗ ರೇಂಜ್ ವ್ಯಾಪ್ತಿಯ ಹಲವು ಕಡೆ ಅರಣ್ಯಗಳಲ್ಲಿ ಕೂಂಬಿಂಗ್ ಮಾಡಲಾಗಿದೆ. 25 ಕಡೆ ದಾಳಿ ನಡೆಸಿ, 19 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತ ಡಾ.ಅಜಿತ್ ಕುಮಾರ್ ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ವ್ಯಾಪ್ತಿಯಲ್ಲಿ ಮತ್ತು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯ ಸೇವನೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ 5.2 ಲೀಟರ್ ಬಿಯರ್ ಮತ್ತು 3.780 ಲೀಟರ್ ಐಎಂಎಲ್ ಮದ್ಯ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]