ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 29 ಆಗಸ್ಟ್ 2019
ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಿಗ ಶಿಕ್ಷೆ ಕೊಡಿಸುವ ಸಲುವಾಗಿ ಹಣ ಪಡೆಯುತ್ತಿದ್ದ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಭದ್ರಾವತಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರವೀಂದ್ರ ಅವರು ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಸುನಿಲ್ ಗಾಯಕ್’ವಾಡ್ ಎಂಬುವವರಿಂದ 20 ಸಾವಿರ ರೂ. ಹಣ ಸ್ವಿಕರಿಸುತ್ತಿದ್ದಾಗ, ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿರಂಜನ್ ಕದಂ ಎಂಬುವವರ ಕೊಲೆ ಪ್ರಕರಣದಲ್ಲಿ, ಆರೋಪಿಗಳಿಗೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆ ಕೊಡಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇದಕ್ಕಾಗಿ ಸರ್ಕಾರಿ ಅಭಿಯೋಜಕ ರವೀಂದ್ರ ಅವರು 50 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊದಲು 2 ಸಾವಿರ ಮತ್ತು 5 ಸಾವಿರ ಹಣವನ್ನು ಪ್ರತ್ಯೇಕವಾಗಿ ಪಡೆದಿದ್ದರು ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.
ಡಿವೈಎಸ್’ಪಿ ಎಲ್.ವೇಣುಗೋಪಾಲ್, ಇನ್ಸ್’ಪೆಕ್ಟರ್ ವೀರೇಂದ್ರ, ಜೆ.ಎಸ್.ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ವಸಂತ, ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
