ಶಿವಮೊಗ್ಗ ಲೈವ್.ಕಾಂ | ಹೊಸನಗರ | 19 ಸೆಪ್ಟೆಂಬರ್ 2019
ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿ, ನಾಲ್ಕು ತಿಂಗಳ ಗರ್ಭಿಣಿ ಸಾವಿಗೆ ಕಾರಣವಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಯುವಕರಿಗೆ ಶೋಧ ಕಾರ್ಯ ನಡೆಯುತ್ತಿದೆ.
ಹೊಸನಗರ ತಾಲೂಕು ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ನಾಲ್ವರು ಯುವಕರಿದ್ದ ಕಾರು ಅಡ್ಡಾದಿಡ್ಡಿ ಚಲಿಸಿ, ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಗ್ರಾಮದ ಭಾರತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಹೇಗಾಯ್ತು ಘಟನೆ? ಏನಾನು ಹಾನಿಯಾಗಿದೆ?
ಮಾರುತಿಪುರ ಕಡೆಯಿಂದ ಬರುತ್ತಿದ್ದ ರಿಟ್ಜ್ ಕಾರು, ಅಡ್ಡಾದಿಡ್ಡಿ ಚಲಿಸಿದೆ. ಕೇಶವಪುರ ಬಳಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಹಾಲೇಶ್ ಎಂಬುವವರ ಕಾಲಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಟ್ಟೆಮಲ್ಲಪ್ಪ ಬಳಿ ಹರತಾಳು ಮಾರ್ಗಕ್ಕೆ ತಿರುಗಿದ ಕಾರು, ಡೈರಿಗೆ ಹಾಲು ಕೊಂಡೊಯ್ಯುತ್ತಿದ್ದ ಭಾರತಿ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಭಾರತಿ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ ಸಮೀಪದ ಮೋರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದು ನಿಂತಿದೆ. ಗಾರಿನ ಗಾಜು ಪುಡಿಪುಡಿಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಗಣೇಶ್ ಮತ್ತು ಮಂಜು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಗುರಣ್ಣ ಹೆಬ್ಬಾಳ್, ಪಿಎಸ್ಐ ಹಿರಿಯ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]