ಶಿವಮೊಗ್ಗ ಲೈವ್.ಕಾಂ | BHADRAVATHI | 3 ಫೆಬ್ರವರಿ 2020

ಅಪರಿಚಿತ ವಾಹನ ಡಿಕ್ಕಿ ಹೊಡೆದು ಭದ್ರಾವತಿ ಪೇಪರ್ ಟೌನ್ ನಿವಾಸಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಜ್ಜಿನಿಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದೆ.
ಕೇಬಲ್ ಮಂಜುನಾಥ ಗೌಡ (35) ಮೃತ ದುರ್ದೈವಿ. ಭದ್ರಾವತಿ ತಾಲೂಕು ಅಂತರಗಂಗೆಯಲ್ಲಿ ಕೇಬಲ್ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಘಟನೆ ಸಂಭವಿಸಿದೆ.
ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದಾಗ, ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A hit and run case has been reported in Bhadravathi Ujjanipura village. A cable operator has died in the spot. Paper Town Police has registered the case.