ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020

ಟವೆರಾ ಕಾರು ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ತಾಳಗುಪ್ಪ ಬಳಿ ಎರಡು ವಾಹನಗಳು ಇವತ್ತು ಬೆಳಗ್ಗೆ ಮುಖಾಮುಖಿ ಡಿಕ್ಕಿಯಾಗಿವೆ.
ಕಾನ್ಲೆ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಆರು ಜನರಿಗೆ ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಕಾರು ಮತ್ತು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಕಾರಿನಲ್ಲಿದ್ದವರು ತುಮಕೂರು ಮೂಲದವರು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]