ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 6 AUGUST 2024 : ಒಂಟಿ ಮಹಿಳೆ ಕೊಲೆ ಪ್ರಕರಣ ಆರೋಪಿಯನ್ನು (Accused) ಕುಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಮಹಿಳೆಯ ಸಂಬಂಧಿಯೇ ಆಗಿದ್ದು, ಹಲಗೆ ಕಳ್ಳತನಕ್ಕೆ ಹೋದಾಗ ಕೃತ್ಯ ಎಸಗಿದ್ದಾನೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಂಜರಿಕೊಪ್ಪ ಗ್ರಾಮದ ಎಸ್.ಆದರ್ಶ್(30) ಬಂಧಿತ. ಅದೇ ಗ್ರಾಮದಲ್ಲಿ ಒಂಟಿಯಾಗಿ ವಾಸವಿದ್ದ ಸಾವಿತ್ರಮ್ಮ (60) ಅವರನ್ನು ಗುರುವಾರ ಈತ ಹತ್ಯೆ ಮಾಡಿದ್ದ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹಲಗೆ ಕದಿಯಲು ಬಂದು ಹತ್ಯೆ ಮಾಡಿದ
ಕೊಲೆಯಾದ ಸಾವಿತ್ರಮ್ಮ ಬಂಧಿತ ಆದರ್ಶನ ಅತ್ತೆ. ‘ಸಾವಿತ್ರಮ್ಮ ಮನೆಯಲ್ಲಿ ಹಲಗೆ ಕಳವು ಮಾಡಲು ಹೋಗಿದ್ದ. ಎಚ್ಚರಗೊಂಡ ಸಾವಿತ್ರಮ್ಮ ಆದರ್ಶನನ್ನು ಪ್ರಶ್ನೆ ಮಾಡಿದ್ದರು. ಈ ಸಂದರ್ಭ ಆದರ್ಶ ಸಾವಿತ್ರಮ್ಮಳ ಹತ್ಯೆ ಮಾಡಿದ್ದ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ನಲ್ಲಿ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ಪತ್ತೆಗೆ ಕುಂಸಿ ಠಾಣೆ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತು.