ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020
ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯಾಧ್ಯಕ್ಷ ವರಲಕ್ಷ್ಮಿ ಅವರನ್ನು ಬಂಧಿಸಿ, ಕೇಸ್ ಹಾಕಿದ್ದನ್ನು ಖಂಡಿಸಿ ಸಂಘದ ಜಿಲ್ಲಾ ಘಟಕದ ವತಿಯಿಂದ ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನಲ್ಲಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಪ್ರತಿಭಟನೆಯನ್ನು ಹತ್ತಿಕ್ಕಿದ ಸರ್ಕಾರ, ಸುಳ್ಳು ಕೇಸುಗಳನ್ನು ಹಾಕಿದೆ. ಕಾರ್ಯಕರ್ತೆಯರ ಬ್ಯಾಗುಗಳಲ್ಲಿ ಕಲ್ಲು, ಚಾಕುಗಳಿವೆ ಎಂದು ಆರೋಪಿಸಿದ್ದಾರೆ. ಇದಲ್ಲ ನಿರಾಧಾರ. ಹಾಗಾಗಿ ಅಕ್ಷರ ದಾಸೋಹ ನೌಕರರ ಸಂಘದವರ ವಿರುದ್ಧ ಹಾಕಲಾಗಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]