SHIVAMOGGA LIVE NEWS | 19 OCTOBER 2023
THIRTHAHALLI : ಆಂಬುಲೆನ್ಸ್ (Ambulance) ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯ ಬಾಡಿಗೆ ನಿವಾಸದಲ್ಲಿ ರಮೇಶ್ (45) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಯಲ್ಲಿ ಸುಮಾರು 10 ವರ್ಷದಿಂದ ಆಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರಮೇಶ್ ಹೊಸನಗರ ಪಟ್ಟಣದವರು. ಅಲ್ಲಿಯೇ ಅಂತ್ಯಕ್ರಿಯೆ ನಡೆಯಿತು. ಇವರಿಗೆ ಇಬ್ಬರು ಪುತ್ರರಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?