ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆಗೆ ಇನ್ನು ನಾಲ್ಕು ದಿನ ಬಾಕಿ ಇದೆ. ಹಾಗಾಗಿ ರಾಜಕೀಯ ಪಕ್ಷಗಳಲ್ಲಿ ಪ್ರಚಾರ ಬಿರುಸುಗೊಂಡಿದೆ. ಗಣ್ಯಾತಿಗಣ್ಯರು ಕ್ಯಾಂಪೇನ್ ಮಾಡಲು ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ದೇವೇಗೌಡ, ಅಮಿತ್ ಷಾ ಕ್ಯಾಂಪೇನ್
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಪ್ರಚಾರ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ಭದ್ರಕೋಟೆ ಭದ್ರಾವತಿಯಲ್ಲಿ ಅಮಿತ್ ಷಾ ರೋಡ್ ಶೋ ಮಾಡಲಿದ್ದಾರೆ. ಏಪ್ರಿಲ್ 20ರಂದು ಬೆಳಗ್ಗೆ 10.30ಕ್ಕೆ ಅಮಿತ್ ಷಾ ರಾಲಿ ನಡೆಯಲಿದೆ. 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಾಜಿ ಸಿಎಂ ಯಡಿಯೂರಪ್ಪ, ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕೂಡ ರೋಡ್ ಶೋನಲ್ಲಿ ಇರಲಿದ್ದಾರೆ.

ಇನ್ನು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಏ.20ರಂದು ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಉಂಬ್ಳೆಬೈಲು ಗ್ರಾಮದಲ್ಲಿ ನಡೆಯುವ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದ್ದು, ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ ಮತ್ತು ಭದ್ರಾವತಿ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇವತ್ತಿಂದ ಶಿವಮೊಗ್ಗದಲ್ಲೇ ಡಿಕೆಶಿ ಅಂಡ್ ಬ್ರದರ್

ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ, ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ಶಿವಮೊಗ್ಗದತ್ತ ಗುರಿ ನೆಟ್ಟಿದ್ದಾರೆ. ಇವತ್ತಿನಿಂದ ಮೂರು ದಿನ ಡಿಕೆಶಿ ಬ್ರದರ್ಸ್ ಶಿವಮೊಗ್ಗದಲ್ಲೇ ತಂಗಲಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಪ್ರಚಾರ ನಡೆಸುವುದರ ಜೊತಗೆ ಚುನಾವಣಾ ತಂತ್ರಗಳನ್ನು ಹೂಡಲಿದ್ದಾರೆ. ಈಗಾಗಲೇ ಡಿಕೆಶಿ ಬ್ರದರ್ಸ್ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]