SHIVAMOGGA LIVE NEWS | 21 OCTOBER 2023
SHIMOGA : ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ (Amruta Kalasa) ಯಾತ್ರೆಗೆ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.
ನಗರದಲ್ಲಿ ಮೆರವಣಿಗೆ
ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಮೆರವಣಿಗೆ ನಡೆಯಿತು. ತಾಲ್ಲೂಕು ಪಂಚಾಯತ್ ಕಚೇರಿಯಿಂದ ಹೊರಟು ಡಿ.ಸಿ ಕಚೇರಿ ಮುಂಭಾಗದಿಂದ ಕೋರ್ಟ್ ರಸ್ತೆ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣಕ್ಕೆ ತಲುಪಿತು. ಇದೇ ವೇಳೆ ಪಂಚಪ್ರಾಣ ಪ್ರತಿಜ್ಞೆಯನ್ನು ತೆಗೆದು ಕೊಳ್ಳಲಾಯಿತು.
ಏನಿದು ಅಭಿಯಾನ?
ಶಿವಮೊಗ್ಗದ 7 ತಾಲೂಕಿನಲ್ಲು ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ ನಡೆಯಲಿದೆ. ಮಣ್ಣು ಸಂಗ್ರಹ ಕಾರ್ಯ ಮುಗಿದ ನಂತರ ಕಳಶವನ್ನು ನೆಹರು ಯುವ ಕೇಂದ್ರಕ್ಕೆ ಹಸ್ತಾಂತರಿಸಲಾಗುತ್ತದೆ. ಈ ಕಳಶವನ್ನು ರಾಷ್ಟ್ರೀಯ ಯುವ ಕಾರ್ಯಕರ್ತರು ದೆಹಲಿಗೆ ಕೊಂಡೊಯ್ಯಲಿದ್ದಾರೆ. ದೇಶಾದ್ಯಂತ ಮಣ್ಣು ಸಂಗ್ರಹ ಕಾರ್ಯ ನಡೆಯಲಿದೆ. ಅಕ್ಟೋಬರ್ ತಿಂಗಳಿನ ಕೊನೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಮಟ್ಟದ ಕಾರ್ಯಕ್ರಮ ನಡೆಯಲಿದೆ. ಈ ಮಣ್ಣಿನಿಂದ ದೆಹಲಿಯಲ್ಲಿ ಅಮೃತ ವಾಟಿಕಾ (ಉದ್ಯಾನವನ) ಮತ್ತು ಇಂಡಿಯಾಗೇಟ್ನ ಕರ್ತವ್ಯ ಪಥ್ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಸ್ಮಾರಕ ಸ್ಥಾಪಿಸಲಾಗುತ್ತದೆ.
ಇದನ್ನೂ ಓದಿ – ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ ಮುಗಿಯುತ್ತೆ? ಇಲ್ಲಿದೆ 3 ಪ್ರಮುಖಾಂಶ
ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್, ತಾ. ಪಂ ಇಓ ಅವಿನಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಶಿವಮೊಗ್ಗ ತಾಲ್ಲೂಕಿನ ಗ್ರಾ.ಪಂ ಪಿಡಿಓಗಳು, ಎನ್ಎಸ್ಎಸ್ ವಿಭಾಗದ ಅಧಿಕಾರಿಗಳು ಮತ್ತು ಕಾರ್ಯಕರ್ತರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.