SHIVAMOGGA LIVE NEWS | 30 AUGUST 2023
SHIMOGA : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ (Indian Army) ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ, ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ. 21 ವರ್ಷದೊಳಗಿನ ಆಸಕ್ತ ಯುವಕರು ಆನ್ಲೈನ್ ಮೂಲಕ ಅರ್ಜಿ (Application) ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಆನ್ಲೈನ್ https://bcwd.karnataka.gov.in ಮೂಲಕ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸುವುದು.
ಇದನ್ನೂ ಓದಿ- ಕೊನೆ ಕ್ಷಣದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎದುರಾಗಿತ್ತು ದೊಡ್ಡ ಚಾಲೆಂಜ್, ಏನದು? ನಿವಾರಣೆ ಆಗಿದ್ದು ಹೇಗೆ?
ಷರತ್ತುಗಳು ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ 2.50 ಲಕ್ಷ ರೂ. ಹಾಗೂ ಪ್ರ-2ಎ, 3ಎ, 3ಬಿ ಗಳಿಗೆ 1 ಲಕ್ಷ ರೂ. ಇರಬೇಕು. ಅಭ್ಯರ್ಥಿಯು 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಪಡೆದಿರಬೇಕು. ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಯಾವುದಾದರೊಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ದ.ಕ.-0824-2225078, ಉಡುಪಿ-0820-2574881 ಹಾಗೂ ಉ.ಕ.-08382-226589 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.