ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದಂತ ವೈದ್ಯರೊಬ್ಬರ ಮೇಲೆ ಶಿವಮೊಗ್ಗದ ದುರ್ಗಿಗುಡಿಯಲ್ಲಿ ಹಲ್ಲೆ ನಡೆಸಲಾಗಿದೆ. ದೊಣ್ಣೆಯಿಂದ ಅವರ ಕಾರಿನ ಗಾಜು ಒಡೆದು ಹಾಕಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೆಲಸ ಮುಗಿಸಿ ರಾತ್ರಿ ದಂತ ವೈದ್ಯರೊಬ್ಬರು ಕಾರು ತಂದು ಮನೆ ಬಳಿ ನಿಲ್ಲಿಸಿ ನಡೆದು ಹೋಗುತ್ತಿದ್ದರು. ಈ ಸಂದರ್ಭ ಸಮೀಪದ ಮನೆಯ ವ್ಯಕ್ತಿಯೊಬ್ಬರು ವೈದ್ಯರನ್ನು ತಡೆದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ನಾಯಿಯನ್ನು ತಮ್ಮ ಮನೆ ಬಳಿ ಕಟ್ಟದಂತೆ ಎಚ್ಚರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೆ ದೊಣ್ಣೆ ಒಂದರಿಂದ ವೈದ್ಯರ ಕಾರಿನ ಹಿಂಬದಿಯ ಗ್ಲಾಸ್ ಒಡೆದು ಹಾಕಿದ್ದಾರೆ. ಘಟನೆ ಸಂಬಂಧ ವೈದ್ಯರು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.