ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12116 Articles

ಅಡಿಕೆ ಧಾರಣೆ | 26 ಮಾರ್ಚ್‌ 2025 | ಯಾವ್ಯಾವ ಅಡಿಕೆಗೆ ಇವತ್ತು ಎಷ್ಟಿದೆ ರೇಟ್‌?

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ, ಭದ್ರಾವತಿ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ…

ಸೇತುವೆ ಬಳಿ ದಾಳಿ, ಕಾರು, ಬೈಕು ಸಹಿತ ನಾಲ್ವರು ಅರೆಸ್ಟ್‌, ಏನಿದು ಕೇಸ್‌?

ಶಿಕಾರಿಪುರ : ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ (RAID)…

ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು

ಹೊಳೆಹೊನ್ನೂರು : ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮಿನ (Godown) ಮೇಲೆ ದಾಳಿ ಮಾಡಿ 23 ಕ್ವಿಂಟಾಲ್‌…

ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್‌) ಡಿವೈಎಸ್‌ಪಿ ಕೃಷ್ಣಮೂರ್ತಿ ಮತ್ತು ಎ.ಆರ್‌.ಎಸ್‌.ಐ ರವಿಯನ್ನು…

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ತೆಂಗು, ಅಡಿಕೆ ಮರಗಳು ಧರೆಗೆ, ಎಲ್ಲೆಲ್ಲಿ ಹೇಗಿದೆ ವರ್ಷಧಾರೆ?

ಶಿವಮೊಗ್ಗ : ಭಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ಇವತ್ತು ಮಳೆ ತಂಪು ನೀಡಿದೆ. ಜಿಲ್ಲೆಯ ವಿವಿಧೆಡೆ…

BREAKING NEWS – ಭದ್ರಾವತಿಯಲ್ಲಿ ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌

ಭದ್ರಾವತಿ : ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ…

ಅಡಿಕೆ ಧಾರಣೆ | 25 ಮಾರ್ಚ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ಮಾರುಕಟ್ಟೆ ಮಾಹಿತಿ : ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ…

ಸಿಗಂದೂರು ಸೇತುವೆ ವೈಭವ ಕಣ್ತುಂಬಿಕೊಂಡ ಕನ್ನಡದ ನಟ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಕಟ

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ…

BREAKING NEWS – ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಡಿವೈಎಸ್‌ಪಿ

ಶಿವಮೊಗ್ಗ : ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ…

ಶಿವಮೊಗ್ಗದ ಬಿರಿಯಾನಿ ಹೊಟೇಲ್‌ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ, ಮಹಿಳೆಗೆ ಗಾಯ

ಶಿವಮೊಗ್ಗ : ಅಡುಗೆ ಅನಿಲ (GAS) ಸೋರಿಕೆಯಾಗಿ ನಗರದ ಹೊಟೇಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.…