ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 NOVEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸರ್ವ ಸದಸ್ಯರ ಸಭೆ ಮುಂದಕ್ಕೆ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
SAGARA : ನ.19ರಂದು ನಿಗದಿಯಾಗಿದ್ದ ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಮುಂದೂಡಲಾಗಿದೆ. ನ. 19ರಂದು ಬೆಳಿಗ್ಗೆ 10ಕ್ಕೆ ಶೃಂಗೇರಿ ಶಂಕರ ಮಠದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಶಿವಮೊಗ್ಗದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿನ ದಾವೆಯಲ್ಲಿನ ಆದೇಶದಂತೆ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸರ್ವ ಸದಸ್ಯರ ಸಭೆಯ ಮುಂದಿನ ದಿನಾಂಕವನ್ನು ಶೀಘ್ರ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಕುಕಿಸ್, ಬಿಸ್ಕತ್ತು, ಬ್ರೆಡ್, ಬನ್ ತಯಾರಿಕೆ ತರಬೇತಿ
SHIMOGA : ಕುಕಿಸ್, ಬಿಸ್ಕತ್ತು, ಬ್ರೆಡ್, ಬನ್ ಮತ್ತು ವಿವಿಧ ಬಗೆಯ ಬೇಕರಿ ಉತ್ಪನ್ನಗಳ ತಯಾರಿಕೆಗೆ 3 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ನ.20 ರಿಂದ 22ರವರಗೆ ನವುಲೆಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ತರಬೇತಿ ನೀಡಲಾಗುತ್ತದೆ. ತರಬೇತಿ ಶುಲ್ಕ 450 ರೂ. ನಿಗದಿಪಡಿಸಲಾಗಿದೆ. ಆಸಕ್ತರು ಮೊಬೈಲ್ ನಂಬರ್ 7411680410 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಭಾವನೋತ್ಸವ ಕಾರ್ಯಕ್ರಮ
SHIMOGA : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ನ.19ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭವನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚೇಂಬರ್ ಅಧ್ಯಕ್ಷೆ ಸುರೇಖಾ ಮುರಳೀಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೇಂಬರ್ನ ರಾಷ್ಟ್ರೀಯ ಅಧ್ಯಕ್ಷ ಪ್ರೊ. ವರ್ಗೀಸ್ ವೈದ್ಯನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.