SHIVAMOGGA LIVE | 31 JULY 2023
BHADRAVATHI : ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ಮುಂದಿನ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ (Congress Party) ನಗರ ಘಟಕದ ನೂತನ ಅಧ್ಯಕ್ಷ ಎಸ್.ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಕುಮಾರ್, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ (Congress Party) ಹೆಚ್ಚು ಮತಗಳು ಲಭಿಸಲಿದೆ. ಇದಕ್ಕಾಗಿ ಕಾರ್ಯತಂತ್ರ ಸಿದ್ಧವಾಗಿವೆ. ರಾಜ್ಯ ಸರ್ಕಾರದ ಯೋಜನೆಗಳು ಹೆಚ್ಚು ಜನರಿಗೆ ತಲುಪುವಂತೆ ಮಾಡಲಾಗುತ್ತದೆ ಎಂದರು.
ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್ ರೇಟ್ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್?
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್, ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.