ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021
ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ಗಲಭೆ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?
ತಾಲೂಕು ಕಚೇರಿ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಿಗೆ ಸಂಗಮೇಶ್ವರ್ ಸವಾಲು
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಸಂಗಮೇಶ್ವರ್, ಭದ್ರಾವತಿ ಕ್ಷೇತ್ರದಲ್ಲಿ ನೆಲೆ ನಿಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ ಜನರ ಕಷ್ಟಕ್ಕೆ ಸ್ಪಂದಿಸದವರನ್ನು ಕ್ಷೇತ್ರದ ಜನರು ಚುನಾಯಿಸುವುದಿಲ್ಲ. ಹಾಗಾಗಿ ಕೋಮು ಗಲಭೆ ಸೃಷ್ಟಿಸಿ ನೆಲೆ ಕಾಣಲು ಯತ್ನಿಸುತ್ತಿದೆ. ಬಿಜೆಪಿ ಮುಖಂಡರು ಜನರ ಕಷ್ಟಗಳಿಗೆ ಸ್ಪಂದಿಸಲಿ ನೋಡೋಣ ಎಂದು ಸವಾಲು ಹಾಕಿದರು.
ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ?
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]