SHIVAMOGGA LIVE NEWS | BIKE | 30 ಮೇ 2022
ಮಾವನಿಗೆ ಚಿಕಿತ್ಸೆ ಕೊಡಿಸಿಕೊಂಡು ಆಸ್ಪತ್ರೆಯಿಂದ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ.
ಮಂಜುನಾಥ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಡಿಲಕ್ಸ್ ಬೈಕ್ ಕಳ್ಳತನವಾಗಿದೆ. ಮಂಜುನಾಥ್ ಅವರ ಮಾವನಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದರು.
ಆಸ್ಪತ್ರೆ ಆವರಣದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ ಚಿಕಿತ್ಸೆ ಕೊಡಿಸಿ ಬೆಳಗ್ಗೆ ಆಸ್ಪತ್ರೆಯಿಂದ ಹೊರ ಬಂದು ನೋಡುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ, ಮಚ್ಚು ತೋರಿಸಿ ಬೆದರಿಕೆ
ಇದನ್ನೂ ಓದಿ – ಕೋಳಿ ಫೀಡ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಬರ್ಬರ ಸಾವು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.