SHIVAMOGGA LIVE NEWS | 29 ಮಾರ್ಚ್ 2022
ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಖಾಸಗಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ.
ಶರಾವತಿ ನಗರದ ಸಿದ್ದರಾಜು ಎಂಬುವವರಿಗೆ ಸೇರಿದ ಹೀರೋ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿದ್ದ ಸಿದ್ದರಾಜು ಅವರು ಚನ್ನಗಿರಿಗೆ ಹೋಗಿದ್ದರು. ಹಿಂತಿರುಗಿ ಬಂದಾಗ ಬೈಕ್ ನಾಪತ್ತೆಯಾಗಿದೆ.
ಎಲ್ಲಾ ಕಡೆ ಹುಡುಕಾಡಿದ ಸಿದ್ದರಾಜು ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200