ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOLEHONNURU CRIME NEWS | 14 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮನೆ ಮುಂಭಾಗ ನಿಲ್ಲಸಿದ್ದ ಬೈಕ್’ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಆರು ಬೈಕ್’ಗಳನ್ನು ವಶಕ್ಕೆ ಪಡೆಯಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಪಂಚವಟಿ ಕಾಲನಿಯ ಆಟೋ ಚಾಲಕ ಸುರೇಶ ಕರಡಿ (24), ಮಿಳಘಟ್ಟದ ಅಭಿಷೇಕ್ (22) ಗಾಜನೂರಿನ ಇಂದ್ರನಗರದ ಶಿವಕುಮಾರ್ (23) ಬಂಧಿತ ಆರೋಪಿಗಳು.
ಇವರು ಶಿರಾಳಕೊಪ್ಪ, ಗಾಜನೂರು, ಹೊಳೆಹೊನ್ನೂರು ಸೇರಿದಂತೆ ಹಲವು ಕಡೆಗಳಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ಗಳನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು ಮೂವರು ಕಳ್ಳರನ್ನು ಬಂಧಿಸಿ ಅವರ ಬಳಿಯಿದ್ದ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಪಿಐ ಲಕ್ಷ್ಮೀಪತಿ, ಪಿಎಸ್ಐ ಸುರೇಶ, ಸಿಬ್ಬಂದಿ ಮಂಜುನಾಥ, ಮಾಯಪ್ಪ, ಕುಬೇರ ನಾಯ್ಕ, ಪ್ರಕಾಶ್ ನಾಯ್ಕ ಪಾಲ್ಗೊಂಡಿದ್ದರು.