ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ.

ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ರುದ್ರೇಗೌಡ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಆಕಾಂಕ್ಷಿಗಳೇ ಇರಲಿಲ್ಲ
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಜಿಲ್ಲಾ ಬಿಜೆಪಿಯಲ್ಲಿ ಈ ಬಾರಿ ಆಕಾಂಕ್ಷಿಗಳೇ ಇರಲಿಲ್ಲ. ಹಾಗಾಗಿ ಕೋರ್ ಕಮಿಟಿ ಸಭೆಯಲ್ಲಿ ಒಂದೇ ಹೆಸರನ್ನು ಫೈನಲ್ ಮಾಡಿ, ಹೈಕಮಾಂಡ್’ಗೆ ಕಳುಹಿಸಲಾಗಿತ್ತು. ರಾಘವೇಂದ್ರ ಅವರ ಹೆಸರನ್ನಷ್ಟೇ ಅಂತಿಮಗೊಳಿಸಿದ್ದರಿಂದ, ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]