ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಪ್ರಕಟವಾಗಲಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದ ಅಭ್ಯರ್ಥಿಯ ಹೆಸರು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ.
ಶಿವಮೊಗ್ಗದಲ್ಲಿ ಪ್ರತಿಸ್ಪರ್ಧಿಗಳೇ ಇಲ್ಲ
ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಈ ಬಾರಿ ಬಿಜೆಪಿಯಲ್ಲಿ ಆಕಾಂಕ್ಷಿಗಳೇ ಇಲ್ಲ. ಹಾಗಾಗಿ ಕೋರ್ ಕಮಿಟಿ ಸಭೆಯಲ್ಲಿ ಒಂದೇ ಹೆಸರನ್ನು ಶಿಫಾರಸು ಮಾಡಲಾಗಿದೆ. ಬಿ.ವೈ.ರಾಘವೇಂದ್ರ ಅವರ ಹೆಸರನ್ನಷ್ಟೇ ಬೆಂಗಳೂರಿಗೆ ರವಾನಿಸಲಾಗಿದೆ. ಹಾಗಾಗಿ ಅವರಿಗೆ ಟಿಕೆಟ್ ಖಚಿತವಾಗಿದೆ.

ಘೋಷಣೆಗೂ ಮೊದಲೇ ಅಬ್ಬರದ ಪ್ರಚಾರ
ಅಭ್ಯರ್ಥಿ ಘೋಷಣೆಗೂ ಮೊದಲೇ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕ್ಯಾಂಪೇನ್ ಮಾಡುತ್ತಿದ್ದಾರೆ. ಈಗಾಗಲೇ ಜಿಲ್ಲೆಯಾದ್ಯಂತ ಪ್ರಚಾರ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ರಾಘವೇಂದ್ರ ಅವರ ಹೆಸರಿನೊಂದಿಗೆ ಕ್ಯಾಂಪೇನ್ ನಡೆಯುತ್ತಿದೆ. ರಾಘವೇಂದ್ರ ಅವರು ಸಂಸದರಾದಾಗ ಜಾರಿಗೊಳಿಸಿದ ಯೋಜನೆಗಳನ್ನು ಇಟ್ಟುಕೊಂಡು ಪ್ರಚಾರ ನಡೆಸಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]