ಶಿವಮೊಗ್ಗ ಲೈವ್.ಕಾಂ | SHIMOGA | 1 ಅಕ್ಟೋಬರ್ 2019

ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡುವುದು ಬಿಜೆಪಿ ಪಕ್ಷ ಮಾತ್ರ. ಜೆಡಿಎಸ್ ಮತ್ತು ಕಾಂಗ್ರೆಸ್’ಗೆ ಇದು ಸಾಧ್ಯವಿಲ್ಲ ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಮಹಾತ್ಮ ಗಾಂಧಿ ಅವರು ಹೇ ರಾಮ್ ಅಂದರು. ಅವರ ಸಮಾಧಿ ಮೇಲೆ ಹೇ ರಾಮ್ ಎಂದು ಬರೆಸಲಾಗಿದೆ. ಗಾಂಧಿಜಿ ಅಂದಕೊಂಡಂತೆ ರಾಮರಾಜ್ಯ ನಿರ್ಮಿಸಲು ಬಿಜೆಪಿಗೆ ಮಾತ್ರ ಸಾಧ್ಯ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಗಾಂಧೀಜಿ ಹೆಸರಲ್ಲಿ ರಾಜಕೀಯವನ್ನಷ್ಟೆ ಮಾಡುತ್ತಿವೆ ಎಂದು ಆರೋಪಿಸಿದರು.
ಐದು ವರ್ಷ ಯಾರ ಅಭಿವೃದ್ಧಿಯನ್ನು ಮಾಡಲಿಲ್ಲ
ತಂತಿ ಮೇಲೆ ನಡಿಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಇವರು ಅಧಿಕಾರದಲ್ಲಿ ಇದ್ದ ಐದು ವರ್ಷದಲ್ಲಿ ಹಿಂದುಳಿದವರು, ದಲಿತರು ಸೇರಿದಂತೆ ಯಾರ ಅಭಿವೃದ್ಧಿಯನ್ನು ಮಾಡಿಲ್ಲ. ಇದೆ ಕಾರಣಕ್ಕೆ ಅವರು ಸೋಲನುಭವಿಸಿದ್ದು ಎಂದು ಈಶ್ವರಪ್ಪ ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಎಂಎಲ್’ಸಿ ಆಯನೂರು ಮಂಜುನಾಥ್, ಶಾಸಕ ಕುಮಾರ್ ಬಂಗಾರಪ್ಪ, ಮೇಯರ್ ಲತಾ ಗಣೇಶ್, ಉಪಮೇಯರ್ ಚನ್ನಬಸಪ್ಪ ಸೇರಿದಂತೆ ಹಲವರು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]