SHIVAMOGGA LIVE NEWS | 21 SEPTEMBER 2023
SHIMOGA : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನೀರಿನ ಕಳ್ಳ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಮುಖಂಡರು ಮಾನಸಿಕ ವೈದ್ಯರ (doctor) ಬಳಿ ಪರೀಕ್ಷಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಪ್ರತಿ ಬಾರಿಯು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಕೂಡಲೆ ಅವರು ಮಾನಸಿಕ ವೈದ್ಯರನ್ನು (doctor) ಕಾಣಬೇಕು ಎಂದು ಆಗ್ರಹಿಸಿದರು.
ಬಿಜೆಪಿಯಲ್ಲಿ ಈಶ್ವರಪ್ಪ ಮೂಲೆಗುಂಪಾಗಿದ್ದಾರೆ. ಆದರೂ ಯಾವುದಾದರು ಅಧಿಕಾರ ಸಿಗಬಹುದು ಎಂದು ವಿವಾದಿತ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಉನ್ನತ ಸ್ಥಾನ ಪಡೆಯಬಹುದು ಎಂಬ ಆಸೆಯಲ್ಲಿದ್ದಾರೆ. ಅವರ ಆಸೆ ಈಡೇರುವುದಿಲ್ಲ. ಇನ್ನು ಮುಂದೆ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇಲ್ಲ ಸಲ್ಲದ ಹೇಳಿಕೆ ನೀಡಿದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ದೇವೇಂದ್ರಪ್ಪ ಎಚ್ಚರಿಕೆ ನೀಡಿದರು.
ಇದನ್ನೂ ಓದಿ – ಪ್ರಣವಾನಂದ ಸ್ವಾಮೀಜಿ ವಿರುದ್ಧ ಈಡಿಗರು ಗರಂ, ಮಿನಿಸ್ಟರ್ ಕುರಿತ ಹೇಳಿಕೆ ಹಿಂಪಡೆಯಲು ವಾರ್ನಿಂಗ್
ಈಶ್ವರಪ್ಪ ಅವರು ಸಕಾರಾತ್ಮಕ ಹೇಳಿಕೆ ನೀಡಿ ಯುಕವರಿಗೆ ಉತ್ತಮ ಮಾರ್ಗ ತೋರಿಸಲಿ. ಇದರ ಹೊರತು ಧರ್ಮಗಳ ನಡುವೆ ವೈಷಮ್ಯ ಮೂಡಿಸುವಂತಹ ಹೇಳಿಕೆ ನೀಡುವುದು ಸರಿಯಲ್ಲಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕವಿತಾ, ಮಧುಸೂದನ್, ಬಾಲಾಜಿ, ಅರ್ಜುನ್, ಪುರಲೇ ಮಂಜುನಾಥ್ ಸೇರಿದಂತೆ ಹಲವರು ಇದ್ದರು.
