ಶಿವಮೊಗ್ಗ ಲೈವ್.ಕಾಂ | 18 ಮೇ 2019
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಗ್ಯಾರಂಟಿ ಅಂತಾ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಮೈತ್ರಿ ಪಕ್ಷಗಳಲ್ಲಿ ಸಿಎಂ ಸ್ಥಾನಕ್ಕಾಗಿ ಹಲವರ ಹೆಸರು ಚಾಲ್ತಿಯಲ್ಲಿದೆ. ಸಿದ್ದರಾಮಯ್ಯ, ರೇವಣ್ಣ, ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದೆ. ಇದನ್ನು ನೋಡಿದರೆ, ಲೋಕಸಭೆ ಚುನಾವಣೆ ಬಳಿಕ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಗ್ಯಾರಂಟಿ ಅನಿಸುತ್ತೆ ಎಂದರು.
ಮುನ್ನೂರರ ಗಡಿ ದಾಟುತ್ತೆ ಬಿಜೆಪಿ
ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಒಂದು ಲಕ್ಷಕ್ಕೂ ಅಧಿಕ ಮತದಿಂದ ಗೆಲುವು ಸಾಧಿಸಲಿದೆ. ಹಾಗೆಯೇ, ಇಡೀ ದೇಶದಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಇನ್ನು ಮಿತ್ರ ಪಕ್ಷಗಳು ಲೆಕ್ಕ ಸೇರಿದರೆ ಯಾರೂ ಊಹೆ ಮಾಡಲು ಸಾಧ್ಯವಾಗದಷ್ಟು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
