ಶಿವಮೊಗ್ಗ ಲೈವ್.ಕಾಂ | SHIMOGA | 15 ಅಕ್ಟೋಬರ್ 2019

ಶಿವಮೊಗ್ಗ ಸಾಗರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಆಗಿಲ್ಲ.
ಹೊಸನಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ನಂಜಪ್ಪ ಹೆಲ್ತ್ ಕೇರ್ ಆಸ್ಪತ್ರೆ ಬಳಿ ಅಪಘಾತಕ್ಕೀಡಾಗಿದೆ. ಟೆಂಪೊ ಟ್ರಾವಲರ್ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಚಾಲಕ ಸೇರಿದಂತೆ 20ಕ್ಕು ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ವಲ್ಪದರಲ್ಲೆ ತಪ್ಪಿತು ಭಾರೀ ದುರಂತ
ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಹೊಡೆದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಳೆಯಾಗಿದ್ದರಿಂದ ವಿದ್ಯುತ್ ಪ್ರಸರಣ ಇರಲಿಲ್ಲ. ಒಂದು ವೇಳೆ ವಿದ್ಯುತ್ ಪ್ರಸರಣ ಇದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳೀಯರ ನೆರವಿನಿಂದಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪಶ್ಚಿಮ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ADVERTISEMENT

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]