ಶಿವಮೊಗ್ಗ ಲೈವ್.ಕಾಂ | SAGARA | 16 ಅಕ್ಟೋಬರ್ 2019

ಶಿವಮೊಗ್ಗ ಸಾಗರ ರಸ್ತೆಯಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.
ಆನಂದಪುರ ಬಳಿಯ ಹೊಸೂರು ರೈಲ್ವೆ ಗೇಟ್ ಬಳಿ ರೈಲ್ವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಹೋಗಿದೆ.
ಬಸ್ಸಿನಿಂದ ಕೆಳಗಿಳಿಯಲು ಪ್ರಯಾಣಿಕರ ಹರಸಾಹಸ
ರೈಲ್ವೆ ತಡೆಗೋಡೆಗೆ ಡಿಕ್ಕಿಯಾಗಿದ್ದರಿಂದ ಬಸ್ಸಿನ ಎಡಗಡೆಯ ಎರಡು ಬಾಗಿಲಿನಿಂದ ಪ್ರಯಾಣಿಕರು ಕೆಳಗಿಳಿಯಲು ಸಾದ್ಯವಾಗಲಿಲ್ಲ. ಹಾಗಾಗಿ ಚಾಲಕನ ಕಡೆಗೆ ಇದ್ದ ಬಾಗಿಲಿನಿಂದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಇದೆ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು, ಸ್ಥಳೀಯರು ನೆರವಿನಿಂದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]