ಶಿವಮೊಗ್ಗ ಲೈವ್.ಕಾಂ | 20 ಮೇ 2019
ಚಾಲಕನ ನಿಯಂತ್ರಣ ತಪ್ಪಿದ KSRTC ರಾಜಹಂಸ ಬಸ್, ಮೆಗ್ಗಾನ್ ಆಸ್ಪತ್ರೆ ಮುಂಭಾಗ, ಸಾಗರ ರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ ಜಖಂ ಆಗಿದೆ. ಗ್ಲಾಸ್ ಪುಡಿಯಾಗಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ರಾಜಹಂಸ ಬಸ್, ಇಲ್ಲಿಂದ ಶಿರಸಿ ಕಡೆಗೆ ಪ್ರಯಾಣ ಬೆಳೆಸಿತ್ತು. ಮೆಗ್ಗಾನ್ ಆಸ್ಪತ್ರೆ ಮುಂಭಾಗ, ಪೊಲೀಸ್ ಕ್ಯಾಂಟೀನ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ.
ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದಿದ್ದು ಮತ್ತು ಸಿಟಿ ವ್ಯಾಪ್ತಿಯಲ್ಲೇ ಘಟನೆ ಸಂಭವಿಸಿದ್ದರಿಂದ, ವೇಗ ಕಡಿಮೆ ಇತ್ತು. ಇದರಿಂದ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
