SHIVAMOGGA LIVE NEWS | ACCIDENT | 12 ಮೇ 2022
ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಭದ್ರಾವತಿ ತಾಲೂಕು ಯಡೆಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಚನ್ನಗಿರಿ ಕಡೆಯಿಂದ ಬರುತ್ತಿದ್ದ ಮಾರುತಿ ಓಮ್ನಿ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೂ ಹಾನಿ ಉಂಟಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ವರದಿ : ಮಂಜುನಾಥ್.ಕೆ.ಎಲ್
ಇದನ್ನೂ ಓದಿ ⇒ ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ