ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020

ಪೌರತ್ವ ಕಾಯ್ದೆ, NRC ಮತ್ತು NPR ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ಆಹೋರಾತ್ರಿ ಧರಣಿ ನಡೆಯಲಿದೆ. ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭವಾಗಿದ್ದು, ರಾತ್ರಿ ಇಡೀ ಮುಂದುವರೆಯಲಿದೆ.
https://www.facebook.com/liveshivamogga/videos/184994712600756/?t=1
ನಗರದ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶಿವಮೊಗ್ಗದ ಜಾಯಿಂಟ್ ಆಕ್ಷನ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಿಳೆಯರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಅಹೋರಾತ್ರಿ ಧರಣಿ ನಡೆಯುವ ಹಿನ್ನೆಲೆ ಮತ್ತು ಯಾವುದೇ ಆಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]