SHIVAMOGGA LIVE NEWS | 20 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ 27 ಅಭ್ಯರ್ಥಿಗಳಿಂದ 38 ನಾಮಪತ್ರ ಸಲ್ಲಿಕೆಯಾಗಿದೆ. ಕಣದಲ್ಲಿರುವ ಘಟಾನೂಘಟಿಗಳೆ ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿದ್ದಾರೆ.
ಕೊನೆ ದಿನ ಮತ್ತೆ ನಾಮಪತ್ರ
ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಹೆಸರಿನಲ್ಲಿ ಕೊನೆ ದಿನ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗಿದೆ. ಯಾವುದೇ ಕಾರಣಕ್ಕೂ ತಮ್ಮ ನಾಮಪತ್ರ ತಿರಸ್ಕೃತಗೊಳ್ಳಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಒಂದಕ್ಕಿಂತಲೂ ಹೆಚ್ಚು ನಾಮಪತ್ರ ಸಲ್ಲಿಸಲಾಗಿದೆ.
ಘಟಾನುಘಟಿಗಳಿಂದಲೇ ಹೆಚ್ಚು ನಾಮಪತ್ರ
ಲೋಕಸಭೆ ಕ್ಷೇತ್ರದ ಘಾಟಾನುಘಟಿ ಅಭ್ಯರ್ಥಿಗಳು ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಲಾ ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ಅಭ್ಯರ್ಥಿ ಚಂದ್ರಶೇಖರ್.ಹೆಚ್.ಸಿ, ಸ್ವತಂತ್ರ ಅಭ್ಯರ್ಥಿಗಳಾದ ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ರವಿಕುಮಾರ್.ಎನ್ ತಲಾ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಪಿಯುಸಿ ನಂತರ ಮುಂದೇನು? ಕಾಮರ್ಸ್ ವಿದ್ಯಾರ್ಥಿಗಳಿಗೆ ಶಿವಮೊಗ್ಗದಲ್ಲಿ ಉಚಿತ ಕಾರ್ಯಾಗಾರ, ಎಲ್ಲಿ? ಯಾವಾಗ?