ಶಿವಮೊಗ್ಗ ಲೈವ್.ಕಾಂ | TALAGUPPA NEWS | 30 ಅಕ್ಟೋಬರ್ 2021
ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕಾರು ಹೊತ್ತಿ ಉರಿದಿದೆ.
ಸಾಗರ ತಾಳಗುಪ್ಪ ರಸ್ತೆಯ ಕಾನಲೆ ತಿರುವು ಬಳಿ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಲಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೆ ಸಮಸ್ಯೆಯಾಗಿಲ್ಲ.
ಸ್ಥಳೀಯರು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಆದರೆ ತೀವ್ರತೆ ಹೆಚ್ಚಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು.