ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 DECEMBER 2022
ಶಿವಮೊಗ್ಗ : ಬೈಪಾಸ್ ರಸ್ತೆಯ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. (hit and run at bypass)
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಬುದ್ಧ ನಗರದ ನಿವಾಸಿ ನಾಸಿರ್ ಪಾಷಾ (50) ಮೃತರು. ಬೈಪಾಸ್ ರಸ್ತೆಯಲ್ಲಿರುವ ಭಾರತ್ ಬೆಂಜ್ ಸರ್ವಿಸ್ ಸೆಂಟರ್ ನಲ್ಲಿ ಕ್ಲೀನರ್ ಕೆಲಸ ಮಾಡುತ್ತಿದ್ದರು. ಸಂಜೆ 7 ಗಂಟೆಗೆ ಶೋ ರೂಂಗೆ ನಡೆದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಎಂ.ಆರ್.ಎಸ್ ಸರ್ಕಲ್ ಕಡೆಯಿಂದ ಬಂದ ಬಿಳಿ ಬಣ್ಣದ ಕಾರು ನಾಸಿರ್ ಪಾಷಾ ಅವರಿಗೆ ಹಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. (hit and run at bypass)
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಲಕ್ಷ ಲಕ್ಷದ ಸುಪಾರಿ ಕೊಟ್ಟು ತಂದೆಯನ್ನೆ ಕೊಲ್ಲಿಸಿದ ಮಕ್ಕಳು, ಒಬ್ಬ ಪೊಲೀಸ್ ಸೇರಿ 5 ಅರೆಸ್ಟ್
ಘಟನೆಯಲ್ಲಿ ನಾಸಿರ್ ಪಾಷಾ ತಲೆ, ಕೈ ಸೇರಿದಂತೆ ವಿವಿಧೆಡೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.