SHIVAMOGGA LIVE NEWS | 14 SEPTEMBER 2023
RIPPONPETE : ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಪಲ್ಟಿಯಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿದೆ.
ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರಿನಲ್ಲಿ ಹೊಸನಗರದ ಐವರು ಪ್ರಯಾಣಿಸುತಿದ್ದರು. ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದವರು ಪಾರಾಗಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – WhatsAppನಲ್ಲಿ Instagram ರೀತಿಯ ಫೀಚರ್, ಇನ್ಮುಂದೆ ನಿಮ್ಮದೆ ಚಾನಲ್ ಮಾಡಬಹುದು