ಶಿವಮೊಗ್ಗ ಲೈವ್.ಕಾಂ | SHANKARAGHATTA | 13 ಮಾರ್ಚ್ 2020
ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲದಯದ ಘಟಿಕೋತ್ಸವಕ್ಕು ಕರೋನ ಎಫೆಕ್ಟ್ ತಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಘಟಿಕೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 28ರಂದು ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಿಗದಿಯಾಗಿತ್ತು. ಆದರೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮತ್ತು ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಘಟಿಕೋತ್ಸವ ಮುಂದೂಡಲಾಗಿದೆ.
ಕುವೆಂಪು ವಿವಿಯಲ್ಲಿ ನಡೆಯಬೇಕಿದ್ದ ವಿಚಾರ ಸಂಕಿರಣ, ಸಮಾವೇಶಗಳನ್ನು ಕೂಡ ಅನಿರ್ದಿಷ್ಠಾವಧಿಗೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]