ಶಿವಮೊಗ್ಗ ಗಾಡಿಕೊಪ್ಪದ ಬಳಿ ಚಾನೆಲ್’ನಲ್ಲಿ ಮನೆಗಳ್ಳನ ಮೃತದೇಹ, ಅನುಮಾನಾಸ್ಪದ ಸಾವು
ಶಿವಮೊಗ್ಗ ಲೈವ್.ಕಾಂ | SHIMOGA | 9 ಜನವರಿ 2020 ತುಂಗಾ ನಾಲೆಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಠಕ್ಕರ್ ಫಯಾಜ್ ಎಂದು ಗುರುತಿಸಲಾಗಿದೆ. ಗಾಡಿಕೊಪ್ಪದ ಬಳಿ ಇರುವ ತುಂಗಾ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಠಕ್ಕರ್ ಫಯಾಜ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈತ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more