ATNC ಕಾಲೇಜಿನಲ್ಲಿ ನಾಯಕತ್ವ ತರಬೇತಿ, ವಿದ್ಯಾರ್ಥಿಗಳಿಗೆ ಯಾರೆಲ್ಲ ಏನೆಲ್ಲ ಸಲಹೆ ನೀಡಿದರು? ಇಲ್ಲಿದೆ ಪಾಯಿಂಟ್ಸ್‌

Leadership-training-at-ATNC-College-in-Shimoga.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ನಾಯಕತ್ವ ತರಬೇತಿ (Leadership Training) ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ವಿಷಯದ ಕುರಿತು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ವಿಶೇಷ ಉಪನ್ಯಾಸ ನೀಡಿದರು. ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ … Read more

ಎಟಿಎನ್‌ಸಿ ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ದಿನಾಚರಣೆ, ಧ್ವಜಾರೋಹಣ

NSS-Flag-hoisting-at-ATNCC-College

ಶಿವಮೊಗ್ಗ: ಎಟಿಎನ್‌ಸಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ (NSS Day) ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿಗಳಾದ ಪ್ರೊ. ಮಂಜುನಾಥ್‌.ಎನ್‌, ಗಾಯತ್ರಿ ಸೇರಿದಂತೆ ಹಲವರು ಇದ್ದರು. ಸಂಯೋಜನಾಧಿಕಾರಿ ಪ್ರವೀಣ್‌.ಬಿ.ಎನ್‌ ಸ್ವಯಂ ಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲ ತರಗತಿಗಳಲ್ಲಿಯು ಎನ್‌ಎಸ್‌ಎಸ್‌ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇದನ್ನೂ ಓದಿ » ವಿಡಿಯೋ ಕರೆಯಲ್ಲೆ ಶಿವಮೊಗ್ಗದ ವ್ಯಕ್ತಿ ಅರೆಸ್ಟ್‌, ಹುಷಾರ್‌ ಮುಂದಿನ ಟಾರ್ಗೆಟ್‌ ನೀವೆ, ಏನಿದು ಕೇಸ್‌?

ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?

ATNCC-Students-rally-in-Shimoga-city.

ಶಿವಮೊಗ್ಗ: ಏಡ್ಸ್‌ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು. ಗಾಂಧಿ ಪಾರ್ಕ್‌ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್‌ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, … Read more

JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ, ಯಾರೆಲ್ಲ ಇದ್ದರು? ಏನೆಲ್ಲ ಹೇಳಿದರು?

JNN-College-orientation-programme-in-Shimoga.

ಶಿವಮೊಗ್ಗ: ವಿದ್ಯಾರ್ಥಿ (Students) ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಮಿಷನ್ ಯೋಜನಾ ನಿರ್ದೇಶಕಿ ಚೈತ್ರಾ ರಾವ್ ಸಲಹೆ ನೀಡಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಪದವಿ ಹಂತದಲ್ಲಿ ಕಲಿಯುವ ಇನ್ಟಿಗ್ರೇಷನ್ ಮತ್ತು ಡಿಫರೆಸ್ನಿಯೇಷನ್ ವಿಷಯಗಳು ರಾಕೆಟ್ ವಿಜ್ಞಾನದಲ್ಲಿ ಬಳಸಲಾಗುತ್ತದೆ. ಅದೇ ರೀತಿ ಯಾವುದೇ ವಿಷಯಗಳನ್ನು ನಾವು … Read more

ಸಹ್ಯಾದ್ರಿ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನ ಕಾರ್ಯಾಗಾರ

sahyadri-college-general-image

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಸೆ. 9 ಮತ್ತು 10 ರಂದು ಬೆಳಿಗ್ಗೆ 10.30ಕ್ಕೆ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಎರಡು ದಿನ ವಿಶ್ವವಿದ್ಯಾಲಯ ಮಟ್ಟದ ‘ನಾಯಕತ್ವ ತರಬೇತಿ ಕಾರ್ಯಾಗಾರ’ (Leadership training) ಹಮ್ಮಿಕೊಳ್ಳಲಾಗಿದೆ.  ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್. ಮಂಜುನಾಥ ಕಾರ್ಯಾಗಾರ ಉದ್ಘಾಟಿಸುವರು. ಪ್ರಾಚಾರ್ಯ ಪ್ರೊ.ಟಿ. ಅವಿನಾಶ್ ಅಧ್ಯಕ್ಷತೆ ವಹಿಸುವರು. ರಾಜ್ಯ ಗಾಂಧಿ ಸ್ಮಾರಕ ನಿಧಿ ಕಾರ್ಯಕ್ರಮ ನಿರ್ದೇಶಕ ಪ್ರೊ.ಜಿ.ಬಿ. ಶಿವರಾಜ ಅವರು ಆಶಯ ಭಾಷಣ … Read more

ಭಾರತದ ಟಾಪ್‌ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್‌

kuvempu-University-

ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ (University) ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ … Read more

ಕುವೆಂಪು ವಿವಿ ಸ್ನಾತಕೋತ್ತರ ವಿಭಾಗಕ್ಕೆ ಸೇರುವವರಿಗೆ ಗುಡ್‌ ನ್ಯೂಸ್‌

Kuvempu University File Image 2

ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ (University) 2025–26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೇ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಲಾಗಿದೆ. ಸೆ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು? applications for kuvempu university

ನವಿಲು, ಹುಲಿ ದತ್ತು ಪಡೆದ ಶಿವಮೊಗ್ಗದ ಕಾಲೇಜು, ಎಷ್ಟು ಅವಧಿಗೆ?

NES-Advanced-Studies-college-adopt-tiger

ಶಿವಮೊಗ್ಗ: ನಗರದ ಎನ್ಇಎಸ್ ಇನ್ಸ್‌ಟಿಟ್ಯೂಟ್‌ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿರುವ ಹುಲಿ ಮತ್ತು ನವಿಲನ್ನು ದತ್ತು ಪಡೆದಿದೆ. ಕಾಲೇಜಿನ ಸಭಾಂಗಣದಲ್ಲಿ ನಡೆದ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕಲ್ಯಾಣ ಸಮಿತಿಯ ವತಿಯಿಂದ ಹುಲಿ ಸಿಂಹಧಾಮದ ನಿರ್ದೇಶಕ ಬಿ.ಆರ್.ಅಮರಕ್ಷರ್ ಅವರಿಗೆ ಹಸ್ತಾಂತರಿಸಲಾಯಿತು. ಹುಲಿ ಸಿಂಹಧಾಮದಲ್ಲಿರುವ ಒಂದು ಹುಲಿಯನ್ನು ಒಂದು ತಿಂಗಳ ಅವಧಿಗೆ ಮತ್ತು ನವಿಲನ್ನು ಒಂದು ವರ್ಷದ ಅವಧಿಯ ನಿರ್ವಹಣೆ, ಆಹಾರ ಮತ್ತು ಆರೈಕೆಗಾಗಿ ನಿರ್ದಿಷ್ಟ ಮೊತ್ತವನ್ನು ಹಸ್ತಾಂತರ ಮಾಡಲಾಗಿದೆ. ಪರಿಸರ ಮತ್ತು ಮಾನವನ … Read more

ಶಿವಮೊಗ್ಗದಲ್ಲಿ ಎನ್‌ಸಿಪಿ ಕಲಾ ಸಂಗಮ, ವಿದ್ಯಾರ್ಥಿಗಳಿಗೆ 5 ಪ್ರಮುಖ ಸಲಹೆ ನೀಡಿದ NES ಅಧ್ಯಕ್ಷ

National-Pharmacy-college-programme-in-shimoga

ಶಿವಮೊಗ್ಗ: ನಗರದ ರಾಷ್ಟ್ರೀಯ ಔಷಧ (Pharmacy) ಮಹಾವಿದ್ಯಾಲಯದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಎನ್.ಸಿ.ಪಿ ಕಲಾ ಸಂಗಮ- 2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿದೆ 10 ಸುದ್ದಿಗಳು | 22 ಆಗಸ್ಟ್‌ 2025 ಕಾಲೇಜಿನ ಪ್ರಾಂಶುಪಾಲ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಪೃಥ್ವಿ ಗೌಡ ಮುಖ್ಯ ಅತಿಥಿಯಾಗಿದ್ದರು. Pharmacy college programme

ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ATNCC-College-Programme-SP-Mithun-Kumar.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು? ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು … Read more