ಸೇತುವೆ ಮೇಲಿಂದ ಹಳ್ಳಕ್ಕೆ ಉರುಳಿದ ಟಿಪ್ಪರ್, ಸಂಪೂರ್ಣ ಜಖಂ, ಸ್ವಲ್ಪದರಲ್ಲಿ ತಪ್ಪಿತು ಪ್ರಾಣಹಾನಿ
SHIVAMOGGA LIVE NEWS | 5 FEBRUARY 2024 HOLEHONNURU : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆನವೇರಿ ಸಮೀಪದ ಮತ್ತಿಹಳ್ಳ ಸೇತುವೆ ಮೇಲಿಂದ ಲಾರಿ ಕೆಳಗೆ ಬಿದ್ದಿದೆ. ಎದುರಿನಿಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಲಾರಿ ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಸೇತುವೆಯಿಂದ ಹಳ್ಳಕ್ಕೆ ಉರುಳಿದೆ ಎನ್ನಲಾಗಿದೆ. ಬಿದ್ದ ರಭಸಕ್ಕೆ ಚಕ್ರಗಳು ಕಳಚಿಕೊಂಡು, ಲಾರಿ ಜಖಂ ಆಗಿದೆ. ಎರಡು ಕ್ರೇನ್‌ಗಳನ್ನು ಬಳಸಿ ಭಾನುವಾರ … Read more