ಸ್ಮಶಾನದಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ನೇಹಿತರು
ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸ್ನೇಹಿತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರದ ಮಾರಿಗುಡ್ಡದ ಸ್ಮಶಾನದಲ್ಲಿ ಘಟನೆ ನಡೆದಿದೆ. ಶ್ರೀಕಾಂತ್ (29) ಮತ್ತು ಪ್ರಕಾಶ್ (30) ಮೃತರು. ಇಬ್ಬರೂ ಹೊಸನಗರದಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com