ಚಿತ್ರ ನಟಿ ಬಂಧನಕ್ಕೆ ಆಗ್ರಹಿಸಿ ಸಾಗರದಲ್ಲಿ ಪ್ರತಿಭಟನೆ, ರಾಷ್ಟ್ರಪತಿಗೆ ಮನವಿ

181121 Protest Against Kangara Ranut

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ನಟಿ ಕಂಗನಾ ರಣಾವತ್ ಹೇಳಿಕೆಗೆ ಸಾಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಮತ್ತು ಆಕೆಯನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ. ಸಾಗರದ ಉಪ ವಿಭಾಗೀಯ ಕಚೇರಿ ಮುಂದೆ ಜನಮನ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟಿ ಕಂಗನಾ ಬಂಧನಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ‘ಅತಿರೇಕದ ಪರಮಾವಧಿ, ಯಾರನ್ನೋ ಮೆಚ್ಚಿಸಲು ಯತ್ನ’ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಹಿತಿ ನಾ.ಡಿಸೋಜಾ, ‘1947ರಲ್ಲಿ … Read more

ಭಜರಂಗದಳ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ, ಸ್ಥಾನದಿಂದ ಅಮಾನತು ಮಾಡಿದ ಪಕ್ಷ, ಮುಜುಗರ ತಪ್ಪಿಸಲು ಯತ್ನ

181121 Sagara Ashok Belur In Bajarangadal Programme Controversy

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪದ ಹಿನ್ನೆಲೆ ಯುವ ಕಾಂಗ್ರೆಸ್ ಸಾಗರ ಬ್ಲಾಕ್ ಅಧ್ಯಕ್ಷರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಆವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಮಾಡುತ್ತಿದ್ದಾರೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ … Read more

ಮದುವೆ ಮನೆಯಲ್ಲಿ ಊಟ ಮಾಡಿದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ ಆಸ್ಪತ್ರೆಗೆ ದಾಖಲು

181121 Holehonnur Marriage funtion food poison

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 18 ನವೆಂಬರ್ 2021

ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ಸುಮಾರು ನೂರು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ಶಿವಮೊಗ್ಗ ತಾಲೂಕು ನಾಗತಿಬೆಳಗಲು ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಬೇಧಿ, ಜ್ವರ, ಹೊಟ್ಟೆನೋವು ಕಾಣಿಸಿಕೊಂಡಿದೆ.

ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ

ಬುಧವಾರ ಮಧ್ಯಾಹ್ನ ಊಟ ಸೇವಿಸಿದ್ದ ಹಲವರು ರಾತ್ರಿ ವೇಳೆಗೆ ಅಸ್ವಸ್ಥರಾಗಿದ್ದಾರೆ. ಕೂಡಲೆ ಹಲವರು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರು ಖಾಸಗಿ ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Read more

ಲಕ್ಕಿನಕೊಪ್ಪ ಸರ್ಕಲ್ ಬಳಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ

181121 Accident Near Lakkinakoppa Circle

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021 ಕಾರು, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೆ ಹಾನಿ ಸಂಭವಿಸಿಲ್ಲ. ಲಕ್ಕಿನಕೊಪ್ಪ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಕುವೆಂಪು ವಿಶ್ವವಿದ್ಯಾಲಯದ ಮೂಲಕ ಚಿಕ್ಕಮಗಳೂರಿಗೆ ತೆರಳುತಿತ್ತು. ಲಕ್ಕಿನಕೊಪ್ಪ ಸರ್ಕಲ್ ಬಳಿ ವೇಗವಾಗಿ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಪಕ್ಕಕ್ಕೆ ಹೋಗಿ … Read more

ಬ್ಯಾಕೋಡು ಜೋಡಿ ಕೊಲೆ ಕೇಸ್ ಭೇದಿಸಲು ಆದ್ಯತೆ, ಒಂದು ಲೈಕ್’ಗಾಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಸಲಹೆ

171121 Rohan Jagadish Sagara ASP

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಬ್ಯಾಕೋಡು ಜೋಡಿ ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾಗರ ಉಪ ವಿಭಾಗದ ಹೆಚ್ಚುವರಿ ರಕ್ಷಣಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು. ಸಾಗರದ ನೂತನ ಎಎಸ್’ಪಿಯಾಗಿ ಅಧಿಕಾರ ಸ್ವೀಕರಿಸಿರುವ ರೋಹನ್ ಜಗದೀಶ್ ಅವರು, ಪತ್ರಕರ್ತರೊಂದಿಗೆ ಮಾತನಾಡಿದರು. ಬ್ಯಾಕೋಡು ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಸ್ವಿಕರಿಸಿದ್ದೇವೆ. ಕೊಲೆಗಾರರನ್ನು ಹಿಡಿಯಲು ಶಕ್ತಿಮೀರಿ ಪ್ರಯತ್ನ ನಡೆಸಲಾಗುತ್ತದೆ ಎಂದರು. ಒಂದೇ … Read more

ನಾಡ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಕಂದಾಯ ನಿರೀಕ್ಷಕ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 16 ನವೆಂಬರ್ 2021 ನಾಡ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನ್ನು ಬಂಧಿಸಿದ್ದಾರೆ. ಸಾಗರ ತಾಲೂಕು ಭಾರಂಗಿ ಹೋಬಳಿಯ ಉಪ ತಹಶೀಲ್ದಾರ್ ನಾಡ ಕಚೇರಿ ಮೇಲೆ ಇವತ್ತು ಎಸಿಬಿ ದಾಳಿಯಾಗಿದೆ. ಈ ವೇಳೆ ಹಣ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ಎಸಿಬಿ ಬಲೆಗೆ ಬಿದ್ದಿದ್ದಾರೆ. ಏನಿದು ಪ್ರಕರಣ? ಆಸ್ತಿ ಹಿಸ್ಸೆ ಸಂಬಂಧ ಖಾತೆ ಮಾಡಿಸಲು ಸ್ಥಳೀಯರೊಬ್ಬರು ಹೋಗಿದ್ದರು. … Read more

ಪ್ರಸಾದ ಸೇವಿಸಿದ ಹಲವರು ಅಸ್ವಸ್ಥ, ಸಾಗರ ಆಸ್ಪತ್ರೆಗೆ ದಾಖಲು

141121 Sagara People Admitted to Hopital

ಶಿವಮೊಗ್ಗ ಲೈವ್.ಕಾಂ | SAGARA NEWS | 14 ನವೆಂಬರ್ 2021 ಸಾಗರ ನಗರದ ದೇವಸ್ಥಾನ ಒಂದರಲ್ಲಿ ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ. ಎಲ್ಲರನ್ನು ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿನೋಬನಗರದ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸೇವಿಸಿದ ಸುಮಾರು 20 ಮಂದಿ ಅಸ್ವಸ್ಥಗೊಂಡಿದ್ದಾರೆ. ಶಾಸಕ ಹಾಲಪ್ಪ ಭೇಟಿ ಅಸ್ವಸ್ಥರಾದವರನ್ನು ಕೂಡಲೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿಚಾರ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ … Read more

ಗೋಂದಿಚಟ್ನಳ್ಳಿ ಬಳಿ ಜೆಸಿಬಿ ಚಾಲಕನಿಗೆ ಬೈಕ್ ಡಿಕ್ಕಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಗಾಯಾಳು ಆಸ್ಪತ್ರೆಗೆ ದಾಖಲು

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ವೇಗವಾಗಿ ಬಂದ ಬೈಕ್ ಒಂದು ನಡೆದು ಹೋಗುತ್ತಿದ್ದ ಜೆಸಿಬಿ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಂದಿಚಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ವೇಗವಾಗಿ ಬಂದ ಬೈಕ್ ಜೆಸಿಬಿ ಚಾಲಕ ರಾಘವೇಂದ್ರ (32) ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಾಘವೇಂದ್ರ ಅವರ ಬಲಗಾಲಿನ ತೊಡೆ … Read more

ರಸ್ತೆ ಗುಂಡಿ ಪಕ್ಕದಲ್ಲಿ ಚೇರ್ ಹಾಕಿ ಕುಳಿತ ಸಾಮಾಜಿಕ ಹೋರಾಟಗಾರ, ಇನ್ನೆರಡು ದಿನದ ಗಡುವು

131121 TR Krishnappa Protest In Ripponpete Potholes

ಶಿವಮೊಗ್ಗ ಲೈವ್.ಕಾಂ | RIPPONPETE NEWS | 13 ನವೆಂಬರ್ 2021 ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ತೀವ್ರ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಗುಂಡಿ ಪಕ್ಕದಲ್ಲೇ ಚೇರ್ ಹಾಕಿಕೊಂಡು ಕುಳಿತು ವಾಹನ ಸವಾರರಿಗೆ ಗುಂಡಿಗಳಿವೆ ಜೋರಾಗಿ ಕೂಗಿ ಎಚ್ಚರಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ವಿಭಿನ್ನ ರೀತಿಯಲ್ಲಿ ಹೋರಾಟ ನಡೆಸಿದರು. ಗುಂಡಿ ಪಕ್ಕದಲ್ಲೆ ಕುಳಿತರು ಟಿ.ಆರ್.ಕೃಷ್ಣಪ್ಪ ಅವರು ಗುಂಡಿ ಪಕ್ಕದಲ್ಲೆ ಚೇರ್ … Read more

ಮಂಡಗದ್ದೆ ಬಳಿ ಬೈಕ್ ಅಪಘಾತ, ಗಾಯಾಳುಗಳಿಗೆ ನೆರವಾದ ಗೃಹ ಸಚಿವರು, ಸಿಬ್ಬಂದಿ | VIDEO NEWS

131121 Home Minister Helps Injured at Mandagadde

ಶಿವಮೊಗ್ಗ ಲೈವ್.ಕಾಂ | MANDAGADDE NEWS | 13 ನವೆಂಬರ್ 2021 ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಅವರ ಬೆಂಗಾವಲು ಸಿಬ್ಬಂದಿ ನೆರವಾಗಿದ್ದಾರೆ. ಗಾಯಾಳುಗಳಿಗೆ ಆರೈಕೆ ಮಾಡಿ, ಎಸ್ಕಾರ್ಟ್ ವಾಹನದಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆ ತಂದಿದ್ದಾರೆ. ಮಂಡಗದ್ದೆ ಕಾಡಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಕ್ ಸವಾರರು ಗಾಯಗೊಂಡಿದ್ದು ರಸ್ತೆಯಲ್ಲಿ ನರಳಾಡುತ್ತಿದ್ದರು. ಈ ವೇಳೆ ವಾಹನ ಸವಾರರು ಗಾಯಾಳುಗಳಿಗೆ ನೆರವಾಗಿದ್ದರು. ನೆರವಾದರು ಸಚಿವರು, ಸಿಬ್ಬಂದಿ ಗೃಹ ಸಚಿವ … Read more