ಕಾರುಗಳು ಮುಖಾಮುಖಿ ಡಿಕ್ಕಿ, ಗಾಯಾಳುಗಳಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

130721 MLA helps car Accident injured near mastikatte 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 ಜುಲೈ 2021 ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಆರಗ ಜ್ಞಾನೇಂದ್ರ ನೆರವಾಗಿದ್ದಾರೆ. ಮಾಸ್ತಿಕಟ್ಟೆ ಸಮೀಪ ಘಟನೆ ಸಂಭವಿಸಿದೆ. ತಿರುವಿನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇದೆ ವೇಳೆ ಅಲ್ಲಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು. ಇದನ್ನೂ ಓದಿ | ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ … Read more

ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

130721 Car Accident At Channakoppa near anandapura 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸಾಗರದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಚಾಲಕ ರಾಘು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಜೆಸಿಬಿ ಮೂಲಕ ಗದ್ದೆಯಿಂದ ಹೊರತೆಗೆಯಲಾಯಿತು. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ … Read more

ನಾಯಿಗಳ ದಾಳಿಯಿಂದ ಜಿಂಕೆಗೆ ಗಂಭೀರ ಗಾಯ, ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021 ಆಹಾರ ಅರಸಿ ಬಂದಿದ್ದ ಜಿಂಕೆಯೊಂದರ ಮೇಲೆ ನಾಯಿಗಳು ದಾಳಿ ಮಾಡಿದ್ದರಿಂದ  ಗಂಭೀರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿದೆ. ಬ್ಯಾಕೋಡು ಸಮೀಪ ಕೋಡೂರಿನಲ್ಲಿ ಘಟನೆ ಸಂಭವಿಸಿದೆ. ಶಾಂತರಾಜು ಮತ್ತು ರಾಜು ಎಂಬುವವರ ಜಮೀನಿನ ಬಳಿಗೆ ಜಿಂಕೆ ಬಂದಿತ್ತು. ಅದನ್ನು ಗಮನಿಸಿದ ನಾಯಿಗಳು ದಾಳಿ ಮಾಡಿವೆ. ತಕ್ಷಣ ಜಮೀನು ಮಾಲೀಕರು ಜಿಂಕೆಯನ್ನು ರಕ್ಷಿಸಿ ಅರಣ್ಯಾಧಿಕಾರಿಳಿಗೆ ಮಾಹಿತಿ ನೀಡಿದ್ದರು. ಆರ್‍ಎಫ್‍ಒ ಛಾಯಾ, ಫಾರೆಸ್ಟರ್ ಪ್ರಮೋದ್‍ ಮತ್ತು ನಾಗರಾಜ್ ಅವರ ತಂಡ … Read more

ಭರ್ತಿಯಾದ ಅಂಜನಾಪುರಕ್ಕೆ ಬಾಗಿನ, ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

120721 Bagina For Anjanapura Dam in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್‍ಬೋಲೆ ಗೇಟ್‍ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು. ಅಕ್ಕಪಕ್ಕದ ಊರಿಗೆ ಪೈಪ್‍ಲೈನ್‍ ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ … Read more

ಲಾಡ್ಜ್ ಕೊಠಡಿಯಲ್ಲಿ ದಿಢೀರ್ ಬೆಂಕಿ, ಧಗಧಗ ಉರಿದ ಪೀಠೋಪಕರಣ, ಸ್ಥಳೀಯರಲ್ಲಿ ಕೆಲಕಾಲ ಆತಂಕ

120721 Fire at Kargal Hotel Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 12 ಜುಲೈ 2021 ಲಾಡ್ಜ್‍ನಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೂರನೆ ಮಹಡಿಯ ಕೊಠಡಿಯೊಂದರಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಹಾಸಿಗೆ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಇರಿಸಿದ್ದರಿಂದ ಬೆಂಕಿ ಜೋರಾಗಿ ಉರಿದಿದೆ. ಕಿಟಕಿಯಿಂದ ಬೆಂಕಿಯ ರಭಸ ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರ ನೆರವಿನಿಂದ ಪೊಲೀಸರು … Read more

ಸಾಲ ಬಾಧೆ, ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Farmer Suicide General Image 1

ಶಿವಮೊಗ್ಗ ಲೈವ್.ಕಾಂ | SORABA NEWS | 11 ಜುಲೈ 2021 ಸಾಲ ಬಾಧೆಯಿಂದ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಭೈರೆಕೊಪ್ಪದಲ್ಲಿ ಘಟನೆ ಸಂಭವಿಸಿದೆ. ರವಿಗೌಡ (50) ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನು ಹೊಂದಿರುವ ರವಿಗೌಡ ಅವರು ಕೃಷಿ ಚಟುವಟಿಕೆ ನಡೆಸುತ್ತಿದ್ದರು. ರಾಷ್ಟ್ರೀಕೃತ ಬ್ಯಾಂಕ್ ಒಂದರಿಂದ ಪಡೆದಿದ್ದ ಸಾಲ ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ … Read more

ತುಂಗಾ ನದಿಯಲ್ಲಿ ತೇಲಿ ಬಂತು ಪುರುಷನ ಮೃತದೇಹ

Thirthahalli Name Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 ಜುಲೈ 2021 ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ತೇಲಿ ಬಂದಿದೆ. ಪೊಲೀಸರು ಶವವನ್ನು ಮೇಲೆತ್ತಿದ್ದು, ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಬಾಳೇಬೈಲು ಸಮೀಪ ತುಂಗಾ ನದಿಯಲ್ಲಿ ಮೃತದೇಹ ತೇಲಿ ಬರುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ್ದರು. ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಅಗ್ನಿಶಾಮಕ ದಳದ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಮೇಲೆತ್ತಿದ್ದಾರೆ. ಅಪರಿಚಿತನಿಗೆ ಸುಮಾರು 50 ವರ್ಷ ಇರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ. ತುಂಗಾ … Read more

ಹೊಳೆಹೊನ್ನೂರು ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, 15 ಮಂದಿ ವಿರುದ್ಧ ಕೇಸ್

holehonnur name graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ಜಮೀನು ವಿವಾದ ಸಂಬಂಧ ಭದ್ರಾವತಿ ತಾಲೂಕು ತಿಮ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಚನ್ನಗಿರಿ ತಾಲೂಕು ಚಿಕ್ಕೊಲಿಕೆರೆಯ ಶಿವಲಿಂಗಪ್ಪ (45) ಮೃತರು. ಗಂಭೀರ ಗಾಯಗೊಂಡಿದ್ದ ಶಿವಲಿಂಗಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಏನಿದು ಘಟನೆ? ಯಾಕಾಯ್ತು ಹಲ್ಲೆ? ಶಿವಲಿಂಗಪ್ಪ ಮತ್ತು ಸೋಮಶೇಖರ್ ಕುಟುಂಬದ ನಡುವೆ ತಿಮ್ಲಾಪುರ ಗ್ರಾಮದ ಸರ್ವೇ ನಂ.41ರ ಒಂದು ಎಕರೆ ಜಮೀನು … Read more

ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ, ಅರಣ್ಯ ಇಲಾಖೆ ಗುತ್ತಿಗೆದಾರ ಸ್ಥಳದಲ್ಲೆ ಸಾವು

110721 Car Accident Near Umblebyle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ಮರಕ್ಕೆ ಕಾರು ಡಿಕ್ಕಿಯಾಗಿ ಅರಣ್ಯ ಇಲಾಖೆ ಗುತ್ತಿಗೆದಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಎನ್‍.ಆರ್‍.ಪುರಕ್ಕೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಮಲ್ಲಿಗೇನಹಳ್ಳಿಯ ಲಿಂಗರಾಜು (30) ಮೃತರು. ಜಂಕ್ಷನ್ – ಉಂಬ್ಳೇಬೈಲು ಮಧ್ಯೆ ಅಪಘಾತವಾಗಿದೆ. ಲಿಂಗರಾಜು ಅವರು ಕಾರು ಚಲಾಯಿಸುತ್ತಿದ್ದರು. ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಲಿಂಗರಾಜು ಅವರಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೆ ಮೃತರಾಗಿದ್ದಾರೆ. ಭದ್ರಾವತಿ ಗ್ರಾಮಾಂತರ … Read more

ಸಿಗಂದೂರು ರಸ್ತೆಯಲ್ಲಿ ಹಿಟ್ ಅಂಡ್ ರನ್, ಪಾದಚಾರಿ ಸ್ಥಳದಲ್ಲೇ ಸಾವು

Breaking News Plate

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದ ಸಿಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಆದಿಶಕ್ತಿ ನಗರದ ಬಾಬು (47) ಎಂಬಾತ ಮೃತ ದುರ್ದೈವಿ. ಸಂಜೆ ಘಟನೆ ಸಂಭವಿಸಿದೆ. ಬಾಬು ಅವರು ನಡೆದು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಬು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಪರಾರಿಯಾಗಿದೆ. ಸಾಗರ ಠಾಣೆ ಇನ್ಸ್​​ಪೆಕ್ಟರ್​​ … Read more