ಗೋವಾದಿಂದ ಮನೆಗೆ ಮರಳುತ್ತಿದ್ದಾಗ ಭದ್ರಾವತಿ ಬಳಿ ಅಪಘಾತ, ಕಾರಿನಲ್ಲಿದ್ದ ಇಬ್ಬರು ಸಾವು, ಆರು ಮಂದಿಗೆ ಗಾಯ

041220 Car Accident At Bhadaravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಸಿದ್ಧಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾಜೇಶ್ (19) ಮತ್ತು ತರುಣ್ (19) ಮೃತರು. ಇವರೆಲ್ಲ ಗೋವಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಗೋವಾದಿಂದ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗೋವಾದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಮರಳುತ್ತಿದ್ದರು. ಭದ್ರಾವತಿ ಬೈಪಾಸ್‍ ರಸ್ತೆಯ ಸಿದ್ಧಾಪುರ ಗ್ರಾಮದ … Read more

ಭದ್ರಾವತಿ ಯುವಕ ಈಗ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ

031220 BV Shrinivas Nominated As Youth Congress National President 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಭದ್ರಾವತಿಯ ಯುವಕ ರಾಷ್ಟ್ರೀಯ ಪಕ್ಷವೊಂದರ ಉನ್ನತ ಹುದ್ದೆಗೇರಿದ್ದಾರೆ. ಬಿ.ವಿ.ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈವರೆಗೂ ಹಂಗಾಮಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರನ್ನು ಪೂರ್ಣಾವಧಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿ.ವಿ.ಶ್ರೀನಿವಾಸ್ ಅವರು ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಜುಲೈ ತಿಂಗಳಲ್ಲಿ ಶ್ರೀನಿವಾಸ್ ಅವರಿಗೆ ಹಂಗಾಮಿ ಅಧ್ಯಕ್ಷ ಜವಾಬ್ದಾರಿ ನೀಡಲಾಗಿತ್ತು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಉದ್ಯೋಗ ಸೃಷ್ಟಿಸದ ಕ್ರಮ ಖಂಡಿಸಿ ನಿರಂತರ ಪ್ರತಿಭಟನೆಗಳನ್ನು ನಡೆಸಿದ್ದರು. … Read more

ಅರಹತೊಳಲು, ಕೈಮರದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿಧಾನಸೌಧ ಮುತ್ತಿಗೆಯ ಎಚ್ಚರಿಕೆ

021220 Farmers Protest at Arahatolalu Highway 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಹತೊಳಲು, ಕೈಮರದಲ್ಲಿ ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿದ್ದಾರೆ. ರೈತರಿಗೆ ದೆಹಲಿ ಪ್ರವೇಶಿಸಲು ಅವಕಾಶ ನೀಡದೆ … Read more

ಶಿವಮೊಗ್ಗ ಜಿಲ್ಲೆಯ 271 ಗ್ರಾ.ಪಂಗಳ ಪೈಕಿ 244ರಲ್ಲಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಗ್ರಾ.ಪಂಗೆ ಎಲೆಕ್ಷನ್?

011220 DC KB Shivakumar Press Meet About GP Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಶಿವಮೊಗ್ಗದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಪೈಕಿ 244 ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಧಿಸೂಚನೆ ಪ್ರಕಟ ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 7ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 11ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು … Read more

ಸಾಗರದ ಸೈದೂರು ಬಳಿ ಅಪಘಾತ, ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟು, ಸ್ಥಳದಲ್ಲೇ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 30 NOVEMBER 2020 ಸೇತುವೆ ಸಮೀಪ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲೆ ಭಾಗಕ್ಕೆ ಗಾಯವಾಗಿದ್ದು, ತೀವ್ರ ರಕ್ತಸ್ರಾವ ಸಂಭವಿಸಿ ಅಸುನೀಗಿರುವ ಸಾಧ್ಯತೆ ಇದೆ. ಆಲಳ್ಳಿಯ ಜಯಂತ್ ಮೃತ ದುರ್ದೈವಿ. ಸಾಗರ ತಾಲೂಕು ಕೆಲುವೆ – ಸೈದೂರು ನಡುವಿನ ಕನ್ನೊಳೆ ಸೇತುವೆ ಸಮೀಪ ಕಂಬಕ್ಕೆ ಜಯಂತ್ ಚಲಾಯಿಸುತ್ತಿದ್ದ ಬೈಕ್ ಗುದ್ದಿದೆ. ರಾತ್ರಿ ಘಟನೆ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಲ್ಮೆಟ್ ಧರಿಸದೆ ಇದ್ದುದರಿಂದ … Read more

ಶಿವಮೊಗ್ಗ, ಭದ್ರಾವತಿ ತಾಲೂಕು ವಿಭಜಿಸಿ, ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸಿ, ಸಿಎಂ ಯಡಿಯೂರಪ್ಪಗೆ ಒತ್ತಾಯ

291120 Memorandum to Chief Minister Yedyurappa for Shimoga Rural Taluk 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ನೇತೃತ್ವದ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಹೆಲಿಪ್ಯಾಡ್‍ ಬಳಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿದೆ. ತಾಲೂಕು ಕಚೇರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಜನರು ತಮ್ಮ ಕೆಲಸಗಳಿಗಾಗಿ ನೂಕುನುಗ್ಗಲು … Read more

ತಾಳಗುಪ್ಪದಿಂದ ರೈಲ್ವೆ ಟರ್ಮಿನಲ್ ಶಿಫ್ಟ್, ಕಾಂಗ್ರೆಸ್ ಮಾಜಿ ಅಧ್ಯಕ್ಷರ ಹೇಳಿಕೆಗೆ ಬಿಜೆಪಿ ಅಧ್ಯಕ್ಷರ ತಿರುಗೇಟು

291120 BJP President Megharaj Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ ಶ್ರೀನಿವಾಸ್ ಅವರು ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅಧ್ಯಕ್ಷ ಟಿ.ಡಿ.ಮೇಘರಾಜ್ ತಿರುಗೇಟು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಸಂಬಂಧಿಸಿದಂತೆ ತೀ.ನಾ.ಶ್ರೀನಿವಾಸ್ ಅವರು ಸಂಸದರನ್ನು ಟೀಕಿಸಿರುವುದಲ್ಲದೇ ಲಘುವಾಗಿ ಮಾತನಾಡಿದ್ದಾರೆ. ರೈಲ್ವೆ ಅಭಿವೃದ್ದಿಗೆ ಸಂಬಂಧಿಸಿದಂತೆ ಸಂಸದರು ಮಾಡಿರುವ ಕೆಲಸವನ್ನು ಅವರು ಮರೆತಂತೆ ಕಾಣುತ್ತದೆ. ಇದಕ್ಕೆ ಸಂಬಂಧಿಸಿದಂತೆ ಯಾವ ಹೇಳಿಕೆಯನ್ನು ನೀಡುವ … Read more

ಆಯನೂರು ಹೋಬಳಿಯಲ್ಲಿ ಮುನ್ನೂರು ಕುಟುಂಬಗಳು ಜೋಪಡಿ ಹಾಕಿಕೊಂಡಿರುವ ಜಾಗದಲ್ಲಿ ಗೋ ಶಾಲೆ ಬೇಡ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಪರಿಶಿಷ್ಟ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೇರಿದ ಜಾಗದಲ್ಲಿ ಗೋಶಾಲೆಗೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಎಸ್ಸಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಅವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸ.ನಂ.78 ರಲ್ಲಿ ಸುಮಾರು 43 ಎಕರೆ ಜಾಗವಿದೆ. ಈ ಜಾಗದಲ್ಲಿ ಹಲವು ವರ್ಷಗಳಿಂದ ಪರಿಶಿಷ್ಟರು, ಹಿಂದುಳಿದ ವರ್ಗದವರು ಸುಮಾರು 300ಕ್ಕೂ ಹೆಚ್ಚು … Read more

ಕಾರು ತಡೆದು 15 ಲಕ್ಷ ಹಣ ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್, ದೂರು ಕೊಟ್ಟವನೆ ಈಗ ಅರೆಸ್ಟ್, ಯಾಕೆ?

291120 Anavatti robbery Case three arrest 1

ಶಿವಮೊಗ್ಗ ಲೈವ್.ಕಾಂ |SORABA NEWS | 29 NOVEMBER 2020 ಸೊರಬ ತಾಲೂಕಿನ ತವನಂದಿ – ಕೊರಕೋಡು ಗ್ರಾಮದ ಬಳಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‍ ಸಿಕ್ಕಿದೆ. ದೂರು ನೀಡಿದವನೆ ಈಗ ಅರೆಸ್ಟ್ ಆಗಿದ್ದಾನೆ. ದೂರು ಕೊಟ್ಟವನ ಬಂಧನವೇಕೆ? ಕಾರು ಅಡ್ಡಗಟ್ಟಿ ಲಕ್ಷಾಂತರ ರುಪಾಯಿ ಹಣ ದರೋಡೆ ಪ್ರಕರಣ ಸಂಬಂಧ ಕಾರು ಚಾಲಕ ನಫೀಸ್ ಆಲಂ, ಕನ್ನಪ್ಪ ಮತ್ತು  ವಿಶ್ವನಾಥ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಕಾರು ಚಾಲಕ ನಫೀಸ್ ಆಲಂ … Read more

ಭದ್ರಾವತಿ ಜನ್ನಾಪುರದಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 26 NOVEMBER 2020 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. 1.10 ಲಕ್ಷ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ದೋಚಲಾಗಿದೆ. ಭದ್ರಾವತಿಯ ಜನ್ನಾಪುರದ ಕುರುಬರ ಬೀದಿಯ ಕೆ.ಸಿ.ರಾಮಚಂದ್ರ ಅವರ ಮನೆಯಲ್ಲಿ ಕಳ್ಳತನವಾಗಿದೆ. ಪತ್ನಿಯ ಚಿಕಿತ್ಸೆಗಾಗಿ ರಾಮಚಂದ್ರ ಅವರು ಬೆಂಗಳೂರಿಗೆ ತೆರಳಿದ್ದರು. ಹಿಂತಿರುಗಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇಂಟರ್‍ಲಾಕ್‍ ಮುರಿದ ಕಳ್ಳರು ಮನೆಯ ಕೊಠಡಿಯಲ್ಲಿದ್ದ ಬೀರುವಿನ ಇಂಟರ್‍ಲಾಕ್‍ ಮುರಿದಿರುವ ಕಳ್ಳರು 20 ಸಾವಿರ ರೂ. … Read more