ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?

ACCIDENT-NEWS-GENERAL-IMAGE.

ಶಿವಮೊಗ್ಗ: ಗೋಬಿ ತಿಂದು ವಾಪಾಸಾಗುವಾಗ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ (bike accident) ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ. ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದರ್ಶನ್.ಕೆ (18) ತನ್ನ ಬೈಕ್‌ನಲ್ಲಿ ಸ್ನೇಹಿತ ಪುವರಸ ಎಂಬಾತನನ್ನು ಕೂರಿಸಿಕೊಂಡು ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ ತೆರಳುತ್ತಿದ್ದನು. ಗೊಂದಿಚಟ್ನಹಳ್ಳಿ ಗ್ರಾಮದ ಬಳಿ ಬರುತ್ತಿದ್ದಂತೆ ದರ್ಶನ್ ಚಾಲನೆ ಮಾಡುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ … Read more

ಸಾಗರದಲ್ಲಿ ಪ್ರಾಂತೀಯ ಸಮಾವೇಶ, ಕೋಲ್ಕತ್ತದ ಅವಧೂತರು ಸೇರಿ ಹಲವರು ಭಾಗಿ

Sagara-News-Update.

ಸಾಗರ: ಇಲ್ಲಿನ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಜನವರಿ 25ರಂದು ಮಧ್ಯಾಹ್ನ 2.30ರಿಂದ ಲಯನ್ಸ್‌ ಸಂಸ್ಥೆಯ ಮಲೆನಾಡು ಸಿರಿ ಪ್ರಾಂತೀಯ ಸಮಾವೇಶ (Regional Convention) ನಡೆಯಲಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಕೆ.ಬಿ.ಮಹಾಬಲೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ ನೀಡುವ ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತದೆ. ಕೋಲ್ಕತ್ತದ ಆಚಾರ್ಯ ಪ್ರಿಯಾ ಕೃಷ್ಣಾನಂದ ಅವಧೂತರು, ಸುರೇಶ್ ಪ್ರಭು, ಗಣೇಶ್ ಭಟ್ ಉಪ್ಪೋಣಿ, ರಾಜೀವ್ ಕೋಟ್ಯಾನ್, ಹರಿಪ್ರಸಾದ್ ರೈ ಶ್ರೀನಿವಾಸ್ ಮೂರ್ತಿ, ಅಶ್ವಿನಿಕುಮಾ‌ರ್, … Read more

ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

Thirthahalli-Youth-found-dead-at-tunga-river-new-Photo.

ತೀರ್ಥಹಳ್ಳಿ: ಹುಣಸವಳ್ಳಿ ಗ್ರಾಮದ ಕಲ್ಯಾಣ ಅಗ್ರಹಾರದ ಬಳಿ ತುಂಗಾ ನದಿಯಲ್ಲಿ (Tunga river) ಶುಕ್ರವಾರ ಯುವಕನ ಶವ ಪತ್ತೆಯಾಗಿದೆ. ಕುರುವಳ್ಳಿಯ ಕೃಷಿಕ ವಸಂತ (35) ಮೃತ ಯುವಕ ಎಂದು ಗುರುತಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ? ತೋಟಕ್ಕೆ ಹೋಗುವುದಾಗಿ ತಿಳಿಸಿ ವಸಂತ ಅವರು ಗುರುವಾರ ಮನೆಯಿಂದ ತೆರಳಿದ್ದರು. ಆದರೆ ಮನೆಗೆ ಮರಳಿರಲಿಲ್ಲ. ಹುಣಸವಳ್ಳಿ ಬಳಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದಾಗ ವಸಂತ ಅವರ ಮೃತದೇಹ … Read more

ಆನಂದಪುರ: ಗೊಬ್ಬರ ಹಾಕುವಾಗ ಕಚ್ಚಿದ ಹಾವು, ಮಹಿಳೆ ಸಾವು

Anandapura Sagara Graphics

ಸಾಗರ: ಆನಂದಪುರ ಹೋಬಳಿಯ ಬಳ್ಳಿಬೈಲು ಗ್ರಾಮದಲ್ಲಿ ಹಾವು ಕಚ್ಚಿ (Snake Bite) ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪುಟ್ಟಪ್ಪ ಅವರ ಪತ್ನಿ ಲಕ್ಷ್ಮಮ್ಮ (65) ಮೃತರು. ತಮ್ಮ ಜಮೀನಿಗೆ ಗೊಬ್ಬರ ಹಾಕುತ್ತಿರುವಾಗ ಹಾವು ಕಚ್ಚಿದೆ. ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ  ಫಲಿಸದೆ ಲಕ್ಷ್ಮಮ್ಮ ಕೊನೆಯುಸಿರೆಳೆದಿದ್ದಾರೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈ ಕೈ ಮಿಲಾಯಿಸಿದ ಕೈದಿಗಳು, ಆಗಿದ್ದೇನು?

Shimoga-Central-Jail-Prison

ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ (Central Jail) ಕೈದಿಗಳ ಎರಡು ಗುಂಪುಗಳ ಮಧ್ಯೆ ಜಗಳವಾಗಿದ್ದು, ಕೆಲವು ಕೈದಿಗಳ ಮೇಲೆ ಹಲ್ಲೆ ನಡೆದಿದೆ. ಶರಾವತಿ ವಿಭಾಗದ ಸೊಹೈಲ್ ಅಹ್ಮದ್ ಮತ್ತು ಮೊಹ್ಮದ್ ಜುನೈದ್ ಎಂಬುವವರು ಟವರ್ ವಿಭಾಗದ ಬಳಿ ಬಂದಾಗ ಅನ್ವರ್ ಎಂಬಾತನೊಂದಿಗೆ ಮಾತಿನ ಚಕಮಕಿ ನಡೆದಿದೆ. ನಂತರ ಅನ್ವರ್ ಮತ್ತು ಆತನ ಸಹಚರರು ಭದ್ರಾ ವಿಭಾಗದ ಕೊಠಡಿಗೆ ತೆರಳಿ ಸೊಹೈಲ್ ಮತ್ತು ಜುನೈದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗಾಯಗೊಂಡ ಕೈದಿಗಳನ್ನು ಚಿಕಿತ್ಸೆಗಾಗಿ ಕಾರಾಗೃಹದ … Read more

ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್‌ ಕುಮಾರ್‌, ಕೇಂದ್ರ ಕಾರಾಗೃಹಕ್ಕೆ ಭೇಟಿ

DGP-Prisons-IPS-Officer-Alok-Kumar-visit-to-Shimoga-Airport

ಶಿವಮೊಗ್ಗ: ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಹಿರಿಯ ಪೊಲೀಸ್‌ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅಲೋಕ್‌ ಕುಮಾರ್‌ (Alok Kumar) ಅವರನ್ನು ಸ್ವಾಗತಿಸಿದರು. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್‌  ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್‌ ಕುಮಾರ್‌ ಅವರು ಭೇಟಿ ನೀಡಿದರು. ಜೈಲು ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳ … Read more

ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

BY-Raghavendra-Press-meet-in-Shimoga

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು (car) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ 12‌ ಸುದ್ದಿಗಳು

ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

Arabilachi-Bhadra-Canal-incident.

ಹೊಳೆಹೊನ್ನೂರು: ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದ ಭದ್ರಾ ನಾಲೆ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಎರಡನೇ ಮೃತದೇಹ (Second body) ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ನೀಲಾಬಾಯಿ (55) ಎಂದು ಗುರುತಿಸಲಾಗಿದೆ. ಇಂದು ಎಸ್‌ಡಿಆರ್‌ಎಫ್ (SDRF) ತಂಡ ಕಾರ್ಯಾಚರಣೆ ನಡೆಸಿ ಅರಬಿಳಚಿ ಕ್ಯಾಂಪ್ ಸಮೀಪದ ನಾಲೆಯಲ್ಲಿ ನೀಲಾಬಾಯಿ ಅವರ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದೆ. ಕಳೆದ ಭಾನುವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು. ಇದನ್ನೂ ಓದಿ – ಮದ್ಯದ ಅಮಲು, ರಸ್ತೆ ಬದಿ ಕಾರಿನಲ್ಲೇ … Read more

ಮದ್ಯದ ಅಮಲು, ರಸ್ತೆ ಬದಿ ಕಾರಿನಲ್ಲೇ ಮಗುವಿನ ಜೊತೆ ಮಲಗಿದ ತಂದೆ, ಮುಂದೇನಾಯ್ತು?

Person-slept-inside-a-car-with-doors-loaked-and-baby-inside.

ಭದ್ರಾವತಿ: ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ತನ್ನ ಎರಡು ವರ್ಷದ ಮಗುವಿನೊಂದಿಗೆ ಕಾರಿನಲ್ಲಿ ಮಲಗಿದ್ದ (child locked). ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಕೂಡಲೆ ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ಸುರಕ್ಷಿತವಾಗಿ ತಾಯಿಯ ವಶಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ – ಮುಂಬೈಗೆ ತೆರಳಿದ್ದ ಮಹಿಳೆಗೆ ನೆರೆಹೊರೆ ಮನೆಯಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್ ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಆಗಿದೆ. ಮದ್ಯ ಸೇವಿಸಿದ್ದ ವ್ಯಕ್ತಿ ತನ್ನ ಮಗುವಿನೊಂದಿಗೆ ಕಾರಿನಲ್ಲಿ ಮಲಗಿದ್ದ. ಕಾರಿನ ಬಾಗಿಲುಗಳು ಲಾಕ್‌ ಆಗಿದ್ದವು. ಸಾರ್ವಜನಿಕರ … Read more

ಮದ್ಯ ಸೇವಿಸಿ ಜೈಲಿಗೆ ಬಂದ ಕೈದಿ, ಬ್ಯಾಗ್‌ ಚೆಕ್‌ ಮಾಡಿದಾಗ ಸಿಕ್ತು ಓ.ಟಿ. ಪೌಚ್‌, ಏನಿದು ಪ್ರಕರಣ?

Shimoga-Central-Jail-Prison

ಶಿವಮೊಗ್ಗ: ಪೆರೋಲ್ ರಜೆ ಮುಗಿಸಿ ಕಾರಾಗೃಹಕ್ಕೆ ಮರಳುತ್ತಿದ್ದ ಸಜಾ ಬಂದಿಯೊಬ್ಬ (convict) ಕೇಂದ್ರ ಕಾರಾಗೃಹದೊಳಗೆ ಮದ್ಯ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಕೈದಿ ಮೋಹನ್ ಕುಮಾರ ಎಂಬಾತ ಪೆರೋಲ್ ಮುಗಿಸಿ ಜೈಲಿಗೆ ವಾಪಸ್ಸಾಗುವಾಗ ಮುಖ್ಯದ್ವಾರದ ತಪಾಸಣೆ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ – ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ದಿಢೀರ್‌ ತಪಾಸಣೆ, ಏನೆಲ್ಲ ಪರಿಶೀಲಿಸಿದರು? ಜೈಲಿನ ಮುಖ್ಯದ್ವಾರದ ಆಕ್ಸೆಸ್ ಕಂಟ್ರೋಲ್‌ನಲ್ಲಿ ಕರ್ತವ್ಯದಲ್ಲಿದ್ದ KSISF ಸಿಬ್ಬಂದಿ, ಕೈದಿ ಮೋಹನ್ ಕುಮಾರನನ್ನು ತಪಾಸಣೆ ನಡೆಸಿದರು. ಆತ ಮದ್ಯಪಾನ ಮಾಡಿರುವುದು ಮೇಲ್ನೋಟಕ್ಕೆ … Read more