ಲಾರಿ, ಬೈಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು
ಶಿವಮೊಗ್ಗ ಲೈವ್.ಕಾಂ | ಸಾಗರ | 6 ಸೆಪ್ಟೆಂಬರ್ 2019 ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪದ ಚೂರಿಕಟ್ಟೆ ಬಳಿ ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೊಸೂರು ಗ್ರಾಮದ ಹರೀಶ್ ನಾಯ್ಕ (22) ಮತ್ತು ವಿನಾಯಕ (25) ಮೃತ ಯುವಕರು. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more