ಯಡಿಯೂರಪ್ಪ ಬೆನ್ನಿಗೆ ನಿಂತ ಸ್ವಾಮೀಜಿ, ನಾಯಕತ್ವ ಬದಲಾದರೆ ಕರೋನಾಗಿಂತಲೂ ದೊಡ್ಡ ಅನಾಹುತದ ಎಚ್ಚರಿಕೆ

120621 Swamji Support Yedyurappa Bekkinkalmata 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021 ನಾಯಕತ್ವದ ಬದಲಾವಣೆ ವಿಚಾರದಲ್ಲಿ ಶಿವಮೊಗ್ಗದ ಕೆಲವು ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಾಯಕತ್ವ ಬದಲಾವಣೆಯಾದರೆ ಕರೋನಾಗಿಂತಲೂ ದೊಡ್ಡ ಅನಾಹುತ ಸಂಭವಿಸಲಿದೆ ಅಂತಾ ಮಠಾಧೀಶರೊಬ್ಬರು ಕೇಂದ್ರ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಶಿಕಾರಿಪುರ ತಾಲೂಕು ಕಾಳೇನಹಳ್ಳಿ ಶಿವಯೋಗಾಶ್ರಮಕ್ಕೆ ಸಿಎಂ ಯಡಿಯೂರಪ್ಪ ಅವರು ಇವತ್ತು ಭೇಟಿ ನೀಡಿದ್ದಾರೆ. ಕಾಳೇನಹಳ್ಳಿಯ ಶ್ರೀಗಳು ಲಿಂಗೈಕ್ಯರಾದಾಗ ಸಿಎಂ ಭೇಟಿ ನೀಡಲು ಸಾದ್ಯವಾಗಿರಲಿಲ್ಲ. ಆದ್ದರಿಂದ ಇವತ್ತು ಮಠಕ್ಕೆ ಭೇಟಿ ನೀಡಿದ್ದರು. ಕರೋನಾಗಿಂತಲೂ … Read more

ಆರ್ಥಿಕ ಪ್ಯಾಕೇಜ್ ಹಣವನ್ನು ಬ್ಯಾಂಕ್ ಸಾಲಕ್ಕೆ ಸರಿದೂಗಿಸುವಂತಿಲ್ಲ, ಸಿಎಂ ಖಡಕ್ ಸೂಚನೆ

120621 CM BS Yedyurappa at Shikaripura Helipad 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021 ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್‍ನ ಹಣವನ್ನು ಯಾವುದೆ ಕಾರಣಕ್ಕೂ ಬ್ಯಾಂಕುಗಳು ಸಾಲದ ಹಣಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು. ಶಿಕಾರಿಪುರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಸರ್ಕಾರ ಕರೋನ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಪ್ಯಾಕೇಜ್‍ ಘೋಷಿಸಿದೆ. ಈ ಹಣವನ್ನು ಬ್ಯಾಂಕ್‍ಗಳು ಫಲಾನುಭವಿಗಳ ಸಾಲದ ಮೊತ್ತಕ್ಕೆ ಸರಿದೂಗಿಸಬಾರದು. ಇದನ್ನು ಉಲ್ಲಂಘಿಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ … Read more

‘ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿಚಾರದಲ್ಲಿ ಕಾಂಗ್ರೆಸ್ನವರು ಸಹಕರಿಸಬೇಕು’

120621 CM BS Yedyurappa Visit Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021 ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಇಲ್ಲಿಯು ಏರಿಕೆಯಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಲೋಚನೆಯಿಂದ ಕೆಲಸ ಮಾಡುತ್ತಿದ್ದಾರೆ. ಇಡಿ ವಿಶ್ವವೆ ಅವರನ್ನು ಕೊಂಡಾಡುತ್ತಿದೆ. ಈ ಸಂದರ್ಭದಲ್ಲಿ ಎಲ್ಲರೂ ಸಹಕಾರ  ನೀಡಬೇಕು ಎಂದು ಹೇಳಿದರು. … Read more

ಇನ್ನೊಂದೆರಡು ದಿನಕ್ಕೆ ರಾಜ್ಯಕ್ಕೆ ಬರುತ್ತೆ ಲಸಿಕೆ, ಜನಸಂಖ್ಯೆ ಆಧಾರದ ಮೇಲೆ ಜಿಲ್ಲೆಗಳಿಗೆ ಹಂಚಿಕೆ

120621 CM BS Yedyurappa at Shikaripura Helipad 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021 ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಕರೋನ ಪ್ರಕರಣಗಳು ಹೆಚ್ಚಿದೆ. ಇದನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ , ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕು. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಮಾಣ ಹೆಚ್ಚಳವಾಗಿದೆ. ನಿಯಂತ್ರಣಕ್ಕೆ ಸೂಚಿಸಲಾಗಿದೆ. ಎಂದು ತಿಳಿಸಿದರು. ಜನಸಂಖ್ಯೆ ಆಧಾರದಲ್ಲಿ ಲಸಿಕೆ ಇನ್ನೊಂದೆರಡು ದಿನದಲ್ಲಿ ರಾಜ್ಯಕ್ಕೆ … Read more

ಕಳ್ಳಭಟ್ಟಿ ಕಾಯಿಸುತ್ತಿದ್ದಾಗಲೇ ಅಡ್ಡೆ ಮೇಲೆ ಅಧಿಕಾರಿಗಳ ದಾಳಿ, ಅಮ್ಮ, ಮಗ ಎಸ್ಕೇಪ್

020621 Kallabatti at Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 JUNE 2021 ಜಿಲ್ಲೆಯಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕಳ್ಳಭಟ್ಟಿಗೆ ಡಿಮಾಂಡ್ ಬಂದಿದೆ. ಶಿಕಾರಿಪುರದಲ್ಲಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿ ನಡುರಾತ್ರಿ ದಾಳಿ ನಡೆಸಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ತಾಂಡದ ಮಲ್ಲಪ್ಪನ ಕಟ್ಟೆ ಕೆರೆ ದಡದಲ್ಲಿ ಕಳ್ಳಬಟ್ಟಿ ಕಾಯಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಳ್ಳಭಟ್ಟಿ ಕಾಯಿಸುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊತ್ತಿ ಉರಿಯುತ್ತಿತ್ತು ಬೆಂಕಿ … Read more

ಶಿಕಾರಿಪುರದ ಗ್ರಾಮೀಣ ಭಾಗದಲ್ಲೂ ಕರೋನ ಅಬ್ಬರ, ಯವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟೆಷ್ಟಿದೆ ಪ್ರಕರಣ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಶಿಕಾರಿಪುರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಲ್ಲಿನ ಗ್ರಾಮೀಣ ಪ್ರದೇಶದಲ್ಲಿ 700ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಕೂಡ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಶಿಕಾರಿಪುರ ತಾಲೂಕಿನ ಬಳ್ಳಿಗಾವಿ, ಅಂಬಾರಗೊಪ್ಪ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಹಿರೆಜಂಬೂರು, ಕಪ್ಪನಹಳ್ಳಿ, ನಲೆವಾಗಿಲು ವ್ಯಾಪ್ತಿಯಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಿವೆ. ಚಿಕ್ಕಮಾಗಡಿ, ಹಾರೊಗೊಪ್ಪ, … Read more

ಹಾಸಿಗೆ, ಆಕ್ಸಿಜನ್ ಸಿಗದೆ ಜನ ನರಳುತ್ತಿದ್ದರೆ ಸಂಸದರಿಗೆ ವಿಮಾನ ನಿಲ್ದಾಣದ ಚಿಂತೆ, ಕಮಿಷನ್ ಆಸೆ, ಶಿಕಾರಿಪುರದಲ್ಲಿ ಅಕ್ರೋಶ

150521 Ulli Darshan Press Meet 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 15 MAY 2021 ಕರೋನ ಸೋಂಕಿತರಿಗೆ ಹಾಸಿಗೆ, ಆಕ್ಸಿಜನ್ ಸಿಗದೆ ನರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಸದ ರಾಘವೇಂದ್ರ ಅವರು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಜನಪರ ಕಾಳಜಿಗಿಂತ ಕಮಿಷನ್‍ ಆಸೆಗೆ ದೊಡ್ಡದಾಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್ ಆರೋಪಿಸಿದ್ದಾರೆ. ಶಿಕಾರಿಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ಉಳ್ಳಿ ದರ್ಶನ್, ಜನರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ತಾಲೂಕಿನ … Read more

ತರಕಾರಿ ಖರೀದಿಗೆ ಜನರು ಗುಂಪುಗೂಡುವುದನ್ನು ತಡೆಯಲು ಶಿಕಾರಿಪುರದಲ್ಲಿ ಪಾಸ್ ಸೂತ್ರ

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 MAY 2021 ಮಾರುಕಟ್ಟೆಯಲ್ಲಿ ಜನರು ಅನಗತ್ಯವಾಗಿ ಗುಂಪುಗೂಡುವುದನ್ನು ತಡೆಯಲು ವ್ಯಾಪಾರಿಗಳಿಗೆ ಪಾಸ್ ನೀಡಲು ಶಿಕಾರಿಪುರ ತಾಲೂಕು ಆಡಳಿತ ನಿರ್ಧರಿಸಿದೆ. ಶನಿವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿ ತಹಶೀಲ್ದಾರ್ ಎಂ.ಪಿ.ಕವಿರಾಜ್, ಕಳೆದ ವರ್ಷ ತರಕಾರಿ ವ್ಯಾಪಾರಿಗಳಿಗೆ ಪಾಸ್ ನೀಡಲಾಗಿತ್ತು. ಅದೆ ಮಾದರಿ ಪಾಸ್‍ ವಿತರಿಸಿ, ಆಯಾ ವಾರ್ಡ್‍ನಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದರೆ ಜನ ಗುಂಪುಗೂಡುವುದು ತಪ್ಪಿಸಿದಂತಾಗುತ್ತದೆ ಎಂದರು. ಸೋಮವಾರದಿಂದ ಶಿಕಾರಿಪುರದಲ್ಲಿ ತರಕಾರಿ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಮೊದಲ ದಿನದ ವೀಕೆಂಡ್ ಕರ್ಫ್ಯೂ? ತಾಲೂಕುವಾರು ರಿಪೋರ್ಟ್

175578819 1373910869636996 6771968949187943387 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021 ವೀಕೆಂಡ್ ಕರ್ಫ್ಯೂಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದೆ. ಬಹುತೇಕ ಜನರು ಮನೆಯಿಂದ ಹೊರಬಾರದೆ ಮೊದಲ ದಿನ ಕರ್ಫ್ಯೂಗೆ ಸ್ಪಂದಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಕರ್ಫ್ಯೂ? ಶಿವಮೊಗ್ಗ ತಾಲೂಕು ಶಿವಮೊಗ್ಗ ನಗರ ಮತ್ತು ಹೊರ ವಲಯದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದರು. ಗಸ್ತು ಹೆಚ್ಚಿಸಿದ್ದರು. ಅಗತ್ಯ ವಸ್ತುಗಳ ಖರೀದಿಗೆ ಆಗಮಿಸಿದ್ದ ಜನರು ಬಳಿಕ ಮನೆ ಸೇರಿದ್ದರು. ನಡುವೆ ಹೊರ ಬರುತ್ತಿದ್ದವರಿಗೆ ಪೊಲೀಸರು … Read more

ಶಿರಾಳಕೊಪ್ಪ ಪುರಸಭೆ ಸದಸ್ಯನಿಗೆ ಕರೋನ, ಕಚೇರಿ ಬಂದ್

Shiralakoppa-Purasabhe-Office

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 23 APRIL 2021 ಪುರಸಭೆ ಸದಸ್ಯರೊಬ್ಬರಿಗೆ ಕರೋನ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಿರಾಳಕೊಪ್ಪ ಪುರಸಭೆ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಸೋಂಕಿತ ಸದಸ್ಯ ಪುರಸಭೆ ಕಚೇರಿಗೆ ಬಂದಿದ್ದು, ಹಲವು ಕಡೆ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಪುರಸಭೆ ಕಚೇರಿಯನ್ನು ಬಂದ್ ಮಾಡಲಾಗಿದ್ದು, ಸ್ಯಾನಿಸಟೈಸ್ ಮಾಡಿಸಲಾಗುತ್ತಿದೆ. ಆ ಬಳಿಕ ಕಚೇರಿಯ ಕೆಲಸಗಳು ನಡೆಯಲಿವೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 … Read more