ಶಿಕಾರಿಪುರದಲ್ಲಿ ಯಡಿಯೂರಪ್ಪ ಮಹತ್ವದ ಸಭೆ, ಗೆಲ್ಲುವ ಅಭ್ಯರ್ಥಿ ಅರ್ಜಿ ಸಲ್ಲಿಸದಿದ್ದರೂ ಮನೆಗೆ ಹೋಗಿ ಟಿಕೆಟ್ ನೀಡುವಂತೆ ಸೂಚನೆ
ಶಿವಮೊಗ್ಗ ಲೈವ್.ಕಾಂ | 10 ಮೇ 2019 ಗೆಲ್ಲುವ ಅಭ್ಯರ್ಥಿ ಟಿಕೆಟ್’ಗಾಗಿ ಅರ್ಜಿ ಸಲ್ಲಿಸದಿದ್ದರೂ, ಅವರ ಮನೆಗೆ ಹೋಗಿ ಕರೆತರುವ ಕೆಲಸ ಆಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಚಾರ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಮೇಲೆ ಇಡೀ ರಾಜ್ಯದ ಜನರ ಗಮನವಿದೆ. ಕಾರ್ಯಕರ್ತರು ನಿಷ್ಠೆಯಿಂದ … Read more