ಗಂಟೆ ಗಂಟೆಗೂ ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ, ಈಗೆಷ್ಟು ನೀರನ್ನು ಹೊಳೆಗೆ ಬಿಡಲಾಗುತ್ತಿದೆ?

140621 Tunga Dam Water Outflow 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JUNE 2021 ತುಂಗಾ ಜಲಾಶಯದ ಒಳ ಮತ್ತ  ಹೊರಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಲೆ ಇದೆ. ಈಗ 9500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಬೆಳಗ್ಗೆ 11.30ಕ್ಕೆ ತುಂಗಾ ಜಲಾಶಯಕ್ಕೆ 8375 ಕ್ಯೂಸೆಕ್ ಒಳ ಹರಿವು ಇತ್ತು. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಜಲಾಶಯದ 21 ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ. … Read more

ಸಚಿವರು, ಶಾಸಕರ ಮುಂದೆಯೇ ಸಭೆಯಲ್ಲಿ ಪಿಡಿಒಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

140621 Woman Verbal spat with PDO in Hosudi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಸಚಿವರ ಮುಂದೆಯೇ ಪಿಡಿಒಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು. ಈ ವೇಳೆ ಗ್ರಾಮದ ಮಹಿಳೆಯೊಬ್ಬರು ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಅಶೋಕ್ ನಾಯ್ಕ್‍ ಅವರ ಮುಂದೆಯೇ ಪಿಡಿಒಗೆ ತರಾಟೆ ತೆಗೆದುಕೊಂಡರು. ಮಹಿಳೆಯ ಆಕ್ಷೇಪಕ್ಕೆ ಕಾರಣವೇನು? ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಿದ್ದೇವೆ. ಟೆಸ್ಟ್‍ಗಳನ್ನು ಮಾಡಿಸಿದ್ದೇವೆ ಎಂದು ಪಿಡಿಒ … Read more

BREAKING NEWS | ಗಾಜನೂರಿನ ತುಂಗಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ನೀರು ಹೊರಬಿಡಲಾಗುತ್ತಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ಕ್ರಸ್ಟ್  ಗೇಟುಗಳನ್ನು ತೆಗೆದು ನೀರು ಹೊರಗೆ ಬಿಡಲಾಗಿದೆ. ಇವತ್ತು ಜಲಾಶಯದ 22 ಗೇಟುಗಳ ಪೈಕಿ 21 ಗೇಟುಗಳನ್ನು ಮೇಲೆತ್ತಲಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ಜಲಾಶಯದಿಂದ ನೇರವಾಗಿ ನದಿಗೆ ಒಟ್ಟು 7300 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಮೊದಲ ಮೂರು ಗೇಟುಗಳಲ್ಲಿ ಒಂದು ಅಡಿಯಷ್ಟು ಮೇಲೆತ್ತಲಾಗಿದೆ. ಉಳಿದ 18 ಗೇಟುಗಳನ್ನು ಒಂದು ಇಂಚ್‍ನಷ್ಟು ಮೇಲೆತ್ತಲಾಗಿದೆ. ತುಂಗಾ ಜಲಾಶಯಕ್ಕೆ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ರೆಡಿ, ಎರಡನೇ ಪ್ಯಾಕೇಜ್ ಕರಾರಿಗೆ ಸಹಿ

Shimoga Airport Design

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು. ಮುಂದಿನ ವರ್ಷ ಜೂನ್‍ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಇವತ್ತು ರನ್‍ ವೇ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ, ಅಧಿಕಾರಿಗಳು, ಗುತ್ತಿಗೆದಾರರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ವಿನ್ಯಾಸ ಅನವಾರಣ ಮಾಡಿದ ಸಿಎಂ ಶಿವಮೊಗ್ಗ ವಿಮಾನ … Read more

ನಾಲ್ಕು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

HOLALURU NEWS 1

ಶಿವಮೊಗ್ಗ ಲೈವ್.ಕಾಂ | HOLALURU NEWS | 12 JUNE 2021 ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಮನನೊಂದು ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಭೀಮವ್ವ (32) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ. ಶಿವಮೊಗ್ಗ ತಾಲೂಕು ಹೊಳಲೂರಿನ ಜನತಾ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಭೀಮವ್ವ ಅವರು ಪವನ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರು ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗೋಕಾಕ್‍ನಲ್ಲಿ ನೆಲೆಸಿದ್ದ ದಂಪತಿ ಇತ್ತೀಚೆಗೆ ಪವನ್ … Read more

ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’

Sakrebyle Elephant Camp General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಕೊರೊನಾ ಲಾಕ್ ಡೌನ್ ಸಂದರ್ಭ ಬಡವರಿಗೆ ವಿವಿಧ ಕ್ಷೇತ್ರಗಳಲ್ಲಿ ತೊಂದರೆಗೊಳದಾವರಿಗೆ ವಿವಿಧ ಸಂಘಸಂಸ್ಥೆಗಳು ಹಾಗು ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಜೀವವನ್ನು ಪಣಕ್ಕಿಟ್ಟು ಪ್ರತಿದಿನ ಆನೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತ ಕಾವಾಡಿಗಳನ್ನು ಸರ್ಕಾರ ಕಡೆಗಣಿಸಿದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಗುತ್ತಿಗೆ ಕಾವಾಡಿಗಳು ಸಂಕಷ್ಟದಲ್ಲಿದ್ದಾರೆ. ಆನೆ ಸಿಬ್ಬಂದಿಗಳ ಸಮಸ್ಯೆ ಅರಿತಿರುವ ವೈಲ್ಡ್ ಟಸ್ಕರ್ ಸಂಸ್ಥೆ ಕಾವಾಡಿಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ನೈತಿಕ ಸ್ಥೈರ್ಯ ತುಂಬಿದೆ. … Read more

ಲಾರಿ ಹತ್ತಿ ಡ್ರೈವರ್ ಸೀಟ್ ಹಿಂಭಾಗ ಕುಳಿತಿದ್ದ ನಾಗರ ಹಾವು ರಕ್ಷಣೆ

050621 Snake in truck at haranahalli 1

ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ. ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಲಾರಿಯೊಳಗೆ ಸೇರಿದ್ದ ನಾಗರ ಹಾವನ್ನು ಉರಗ ಪ್ರೇಮಿ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಲಾರಿಯೊಳಗೆ ಚಾಲಕನ ಹಿಂಬದಿಯ ಸೀಟಿನ ಅಡಿಯಲ್ಲಿ ನಾಗರ ಹಾವು ಇತ್ತು. ಸುರೇಶ್ ಎಂಬುವವರಿಗೆ ಸೇರಿದ ಲಾರಿಯೊಳಗೆ ಹಾವು ಇರುವುದು ರಾತ್ರಿ ವೇಳೆ ಗೊತ್ತಾಗಿದೆ. ಕುಡಲೆ ಸ್ನೇಕ್ … Read more

ವಿಮಾನ ನಿಲ್ದಾಣ ಆವರಣದಲ್ಲಿನ ವಿದ್ಯುತ್ ಮಾರ್ಗ ಸ್ಥಳಾಂತರ, ಶಿವಮೊಗ್ಗ ತಾಲೂಕಿನ ವಿವಿಧೆಡೆ ಜೂ.5ರಂದು ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021 ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಆವರಣದಲ್ಲಿ ಹಾದು ಹೋಗಿರುವ 11 ಕೆ.ವಿ. ವಿದ್ಯುತ್ ಮಾರ್ಗವನ್ನು ಸ್ಥಳಾಂತರ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 5ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೆಕೋಡೂ ಗ್ರಾಮದಲ್ಲಿರುವ ವಿದ್ಯುತ್ ವಿತರಣಾ … Read more

ಶಿವಮೊಗ್ಗದ ಹಾರನಹಳ್ಳಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಗುಂಪು ಸೇರುವಂತಿಲ್ಲ, ಸಭೆ, ಸಮಾರಂಭ ಮಾಡುವಂತಿಲ್ಲ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021 ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜೂನ್ 2ರ ಬೆಳಗ್ಗೆ 6 ಗಂಟೆಯಿಂದ ಜೂನ್ 6ರ ರಾತ್ರಿ 12 ಗಂಟೆವರೆಗೆ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ. ಹಾರನಹಳ್ಳಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಣಯ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಮರಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

280521 car accident near tree park sagara road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಟ್ರಿ ಪಾರ್ಕ್ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ರಿಪ್ಪನ್‍ ಪೇಟೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಬೇರೆ ವಾಹನ ಸವಾರರು ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎದುರಿನಿಂದ ಬೇರೆ ವಾಹನಗಳು ಬಂದಿದ್ದರೆ ದೊಡ್ಡ … Read more