ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಗ್ರಾಮಸ್ಥರು ಗರಂ

Youth-Falls-to-Trench-at-adinakottige-village

ಶಿವಮೊಗ್ಗ: ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಟ್ರಂಚ್‌ಗೆ (Trench) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ದೇವಸ್ಥಾನದಿಂದ ಮನೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ್‌ (32) ಎಂಬುವವರು ಮೃತಪಟ್ಟಿದ್ದಾರೆ. ದೇವಸ್ಥಾನದಿಂದ ಮನೆಗೆ ಬಂದಿರಲಿಲ್ಲ ಊರಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆ ಬಳಿಕ ಆಡಿಕೊಟ್ಟಿಗೆ ಗ್ರಾಮದ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿದರು. ಗಣೇಶೋತ್ಸವದ ಹಣಕಾಸು ವಿಚಾರವಾಗಿ ಚರ್ಚಿಸಿ ಮನೆಗೆ ತೆರಳಿದ್ದರು. ಇಂದು … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಆ.30ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ಹಲವು ಕಡೆ ಆಗಸ್ಟ್‌ 30ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, … Read more

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ

KUMSI-NEWS

ಕುಂಸಿ: ಮಾಜಿ ಸೈನಿಕರೊಬ್ಬರು (Former Soldier) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆ‌ರ್.ಸುರೇಶಪ್ಪ ದೊಡ್ಮನೆ (66) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಏನೇನಾಯ್ತು? … Read more

ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ಹೊರ ಹರಿವು?

Heavy-outflow-from-tunga-dam.

ಶಿವಮೊಗ್ಗ: ತುಂಗಾ ಮತ್ತು ಭದ್ರಾ ಜಲಾಶಯದ (Dam) ಒಳ ಮತ್ತು ಹೊರ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ನೀರಿನ ಹರಿವು ಇಳಿಕೆಯಾಗಿದೆ. ತುಂಗಾ ಜಲಾಶಯದ ರಿಪೋರ್ಟ್‌ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 62,168 ಕ್ಯೂಸೆಕ್‌ ಇದೆ. ಒಟ್ಟು 66,809 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಕ್ರಸ್ಟ್‌ ಗೇಟ್‌ಗಳ ಮೂಲಕ 65,651 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಮೇಲ್ದಂಡೆಗೆ 1026 ಕ್ಯೂಸೆಕ್‌, ಎಡದಂಡೆಗೆ 97 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ … Read more

BREAKING NEWS | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ

Bus-Truck-Mishap-near-Gajanuru-in-Shimoga

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನ ಜಾವ ಅಪಘಾತ (Mishap) ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತರಾಗಿದ್ದಾರೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು … Read more

ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

Bike-incident-at-Kachinakatte.

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು … Read more

ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ

Bike-mishap-near-bedrahosahalli-in-Shimoga-taluk

ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ (Hit and Run) ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – ಫಟಾಫಟ್‌ NEWS ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ … Read more

ಶಿವಮೊಗ್ಗ ತಾಲೂಕಿನ ಹಲವು ಕಡೆ ನಾಳೆ ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಪೂರೈಕೆ ಆಗುವ ಫೀಡರ್ ಎ.ಎಫ್-4ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹಾಲದೇವ ಹೊಸೂರು, ಶ್ರೀರಾಂಪುರ, ಮುದ್ದಿನಕೊಪ್ಪ, ಸಿದ್ಲಿಪುರ, ಕೋಟೆಗಂಗೂರು, ತಾವರೆಕೊಪ್ಪ, ವಿರೂಪಿನಕೊಪ್ಪ, ನೀರಾವರಿ ಪಂಪ್‌ಸೆಟ್ ಸ್ಥಾವರ, ಗಾಡಿಕೊಪ್ಪ, ಗಾಡಿಕೊಪ್ಪ ತಾಂಡ, ಮೈಸೂರು ಕೇರಿ, ಗೋಲ್ಡನ್ ಸಿಟಿ ಲೇಔಟ್, ಶಶಿಭೂಷಣ್ ಲೇಔಟ್, … Read more

ಉಂಬ್ಳೇಬೈಲು ಗಸ್ತು ಅರಣ್ಯ ಪಾಲಕ ಎಂ. ಸಲೀಂಗೆ ಮುಖ್ಯಮಂತ್ರಿ ಪದಕ

umblebyle-forest-department-Saleem-CM-Medal

ಶಿವಮೊಗ್ಗ: ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದಾರೆ. ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ ಕೆಲಸವನ್ನು ಪರಿಗಣಿಸಲಾಗಿದೆ. 2015ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಸಲೀಂ, ಶಿವಮೊಗ್ಗ ವನ್ಯಜೀವಿ ವಲಯ ಮತ್ತು ಕೋಗಾರು ವನ್ಯಜೀವಿ ವಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, … Read more

ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?

Lokayuktha-Raid-General-Image

ಶಿವಮೊಗ್ಗ: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ಕಾರ್ಯದರ್ಶಿ ಕುಮಾರನಾಯ್ಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗ್ರಾಮ ಪಂಚಾಯಿತಿ ಕಚೇರಿಯ ಕಾರ್ಯದರ್ಶಿಯ ಕೊಠಡಿಯಲ್ಲಿ ಕುಮಾರನಾಯ್ಕ ₹3000 ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಶ್ರೀರಾಮಪುರ ಗ್ರಾಮದ ವಿನೋದ್‌ ಎಂಬುವವರ ತಾಯಿಯ ಹೆಸರಿನಲ್ಲಿದ್ದ ನಿವೇಶದನಲ್ಲಿ ಮನೆ … Read more