ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಜುಲೈ 2019
ಬಿಜೆಪಿ ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ನಿವಾಸದಲ್ಲೂ ಸಂಭ್ರಮಾಚರಣೆ ನಡೆಯಿತು. ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆ, ಈಶ್ವರಪ್ಪ ಅವರ ಮನೆಗೆ ಆಗಮಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಅಜ್ಜನ ಪರವಾಗಿ ಘೋಷಣೆ ಕೂಗಿಸಿದ ಮೊಮ್ಮಗ
ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಕೆ.ಎಸ್.ಈಶ್ವರಪ್ಪ ಅವರ ಅಭಿಮಾನಿಗಳಿಗೆ, ಅವರ ಮೊಮ್ಮಗ ನಂದನ್, ಘೋಷಣೆ ಕೂಗಿಸಿದ್ದು ವಿಶೇಷವಾಗಿತ್ತು. ಶಾಸಕ ಈಶ್ವರಪ್ಪ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ನಂದನ್ ಘೋಷಣೆ ಕೂಗಿಸಿದ.
ಉಪ ಮುಖ್ಯಮಂತ್ರಿ ಆಗಬೇಕು
ಇನ್ನು, ಸಂಭ್ರಮಾಚರಣೆ ಮಾಡಿದ ಕೆ.ಎಸ್.ಈಶ್ವರಪ್ಪ ಅಭಿಮಾನಿಗಳು, ಅವರಿಗೆ ಸರ್ಕಾರದಲ್ಲಿ ಮಹತ್ವದ ಜವಾಬ್ದಾರಿ ಸಿಗಬೇಕು. ಉಪ ಮುಖ್ಯಮಂತ್ರಿ ಆಗಬೇಕು ಎಂದು ತಮ್ಮ ಇಚ್ಛೆ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಜುಲೈ 2019
